ಟಿಟಿಇ ಸೋಗಿನಲ್ಲಿ ಪ್ರಯಾಣಿಕರಿಗೆ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ
ದೇಶ
ಟಿಟಿಇ ಸೋಗಿನಲ್ಲಿ ಪ್ರಯಾಣಿಕರಿಗೆ ವಂಚಿಸುತ್ತಿದ್ದ ವ್ಯಕ್ತಿಯ ಬಂಧನ
ಪ್ರಯಾಣ ಟಿಕೆಟ್ ಪರೀಕ್ಷಕರ ಸೋಗಿನಲ್ಲಿ ಪ್ರಯಾಣಿಕರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ರಾಜಸ್ಥಾನ ಪೊಲೀಸರು ಬಂಧಿಸಿದ್ದಾರೆ.
ಮುಜಾಫರ್ ನಗರ: ಪ್ರಯಾಣ ಟಿಕೆಟ್ ಪರೀಕ್ಷಕರ ಸೋಗಿನಲ್ಲಿ ಪ್ರಯಾಣಿಕರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ಪರ್ವೇಷ್ ರಾವತ್ ಎಂಬ ವ್ಯಕ್ತಿ ಪ್ರಯಾಣಿಕರಿಂದ ಹಣ ವಸೂಲಿ ಮಾಡಿ ವಂಚಿಸುತ್ತಿದ್ದ, ಟಿಕೆಟ್ ಇಲ್ಲದೇ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ಹಣ ಪಡೆದು ವಂಚಿಸುತ್ತಿದ್ದ ಪರ್ವೇಷ್ ರಾವತ್ ನ್ನು ಡೆಹ್ರಾಡೂನ್-ದೆಹಲಿಗೆ ಸಂಚರಿಸುತ್ತಿದ್ದ ರೈಲಿನಲ್ಲಿ ಪೊಲೀಸರು ಬಂಧಿಸಿದ್ದಾರೆ.
ರೈಲಿನಲ್ಲಿದ್ದ ಕೆಲವು ಪ್ರಯಾಣಿಕರಿಗೆ ನಕಲಿ ಟಿಟಿಇ ಬಗ್ಗೆ ಅನುಮಾನ ಬಂದಿದ್ದು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ಎಚ್ಚೆತ್ತಿರುವ ರೈಲ್ವೆ ಪೊಲೀಸರು ಪ್ರಯಾಣಿಕರನ್ನು ವಂಚಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ