ಕಳೆದ ರಾತ್ರಿ ಕೂಡ ದಕ್ಷಿಣ ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯಲ್ಲಿ ಎನ್ ಕೌಂಟರ್ ನಡೆಸಿದ್ದ ಭದ್ರತಾ ಸಿಬ್ಬಂದಿಗಳು ಮೂವರು ಉಗ್ರರನ್ನು ಹತ್ಯೆ ಮಾಡಿತ್ತು. ಉಗ್ರರನ್ನು ಹತ್ಯೆ ಮಾಡಿದ ಹಿನ್ನಲೆಯಲ್ಲಿ ಕಾಶ್ಮೀರದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಿರುವ ಅಧಿಕಾರಿಗಳು ದಕ್ಷಿಣ ಕಾಶ್ಮೀರದಲ್ಲಿರುವ ಶಾಲೆ ಹಾಗೂ ಕಾಲೇಜುಗಳನ್ನು ಬಂದ್ ಮಾಡಿಸಿದೆ. ಅಲ್ಲದೆ, ವದಂತಿಗಳು ಹರಡದಂತೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಭದ್ರತೆಯನ್ನು ಹೆಚ್ಚಿಸಿದೆ.