ಈ ನಡುವೆ ಉಗ್ರರು ದಾಳಿ ನಡೆಸುತ್ತಿದ್ದ ಅಪ್ರಚೋದಿತ ಗುಂಡಿನ ದಾಳಿ ವೇಳೆ ಮಾಜಿ ಪಂಚಾಯಿತಿ ಮುಖ್ಯಸ್ಥರಿಗೆ ಗಾಯವಾಗಿರುವುದಾಗಿ ವರದಿಗಳು ತಿಳಿಸಿವೆ.
ನಾಜಿರ್ ಅಹ್ಮದ್ ಶಾ ಎಂಬ ಮಾಜಿ ಪಂಚಾಯಿತಿ ಮುಖ್ಯಸ್ಥರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಹ್ಮದ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ನಿನ್ನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ ಮತ್ತು ಬಿಂಬರ್ ಗಲಿಯಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿತ್ತು. ಈ ವೇಳೆ ನಡೆಸಿದ್ದ ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದರು. ಅಲ್ಲದೆ, 6 ವರ್ಷದ ಬಾಲಕಿಯೊಬ್ಬಳು ಮೃತಪಟ್ಟಿದ್ದಳು.