ರಾಷ್ಟ್ರಪತಿ ಚುನಾವಣೆಗೆ ನಿಮ್ಮ ಬೆಂಬಲ ಅಗತ್ಯವಿಲ್ಲ: ಮಮತಾಗೆ ಬಿಜೆಪಿ

ರಾಷ್ಟ್ರಪತಿ ಚುನಾವಣೆಗೆ ನಿಮ್ಮ ಬೆಂಬಲದ ಅಗತ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮದತಾ ಬ್ಯಾನರ್ಜಿಯವರಿಗೆ ಬಿಜೆಪಿ ಮಂಗಳವಾರ ಹೇಳಿದೆ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ನಿಮ್ಮ ಬೆಂಬಲದ ಅಗತ್ಯವಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ಬಿಜೆಪಿ ಮಂಗಳವಾರ ಹೇಳಿದೆ. 
ಕೇಂದ್ರ ಸರ್ಕಾರದ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿ ತೀವ್ರವಾಗಿ ವಾಗ್ದಾಳಿ ನಡೆಸುತ್ತಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್ ಅವರಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದರು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಜಿವಿಎಲ್ ನರಸಿಂಹ ರಾವ್ ಅವರು, ಕಾಂಗ್ರೆಸ್, ರಾಷ್ಟ್ರೀಯ ಜನತಾ ದಳ (ಆರ್'ಜೆಡಿ) ಪಕ್ಷಗಳು ಹಿಂದುಳಿದ ರಾಜಯಕೀಯವನ್ನು ಮಾಡುತ್ತಿದೆ. ಕೋಮವಾದಿ ರಾಜಕೀಯ, ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದ್ದು, ಬಿಜೆಪಿಯ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ರಾಜಕೀಯವನ್ನು ಪ್ರತಿನಿಧಿಸುತ್ತಿಲ್ಲ ಎಂದು ಹೇಳಿದ್ದಾರೆ. 
ಇಂದು ಟಿಎಂಸಿ, ಆರ್'ಜೆಡಿ, ಕಾಂಗ್ರೆಸ್ ಪಕ್ಷಗಳ ನಾಯಕರು ಇಂದು ಗಂಭೀರ ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿದ್ದಾರೆ. ಹೀಗಾಗಿ ಸಾಮಾನ್ಯವಾಗಿಯೇ ಮಮತಾ ಬ್ಯಾನರ್ಜಿಯವರು ಸಕಾರಾತ್ಮಕ ರಾಜಕೀಯಕ್ಕೆ ಬೆಂಬಲ ನೀಡುವುದಿಲ್ಲ ಎಂಬುದು ನಮಗೆ ಗೊತ್ತಿದೆ. ಅವರ ಬೆಂಬಲ ಕೂಡ ನಮಗೆ ಅಗತ್ಯವಿಲ್ಲ. ನಮ್ಮ ಪಕ್ಷ ಜಾತ್ಯತೀತ ಮತ್ತು ತಾರತಮ್ಯವಿಲ್ಲದ ಆಡಳಿತವನ್ನು ಪ್ರತಿನಿಧಿಸುತ್ತಿದ್ದು, ಧನಾತ್ಮಕ ಅಜೆಂಡಾ ಹಾಗೂ ಪ್ರಾಮಾಣಿಕ ಸರ್ಕಾರವಾಗಿದೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com