ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ಹುದ್ದೆಗೆ ನ್ಯಾಯ ಒದಗಿಸುತ್ತೇನೆ, ಆದರೆ ಬಿಜೆಪಿ ತೊರೆಯುತ್ತಿರುವುದು ನೋವಿನ ಸಂಗತಿ: ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ಹುದ್ದೆಗೆ ತನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ ಎಂದು ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ತನ್ನನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದ್ದು, ಆ ಸ್ಥಾನಕ್ಕೆ ನ್ಯಾಯ ಒದಗಿಸುತ್ತೇನೆ ಎಂಬ ಭರವಸೆ ನನಲ್ಲಿದೆ. ಆದರೆ ಬಿಜೆಪಿ ಪಕ್ಷದಿಂದ  ದೂರವಾಗುತ್ತಿರುವುದು ನೋವಿನ ಸಂಗತಿ ಎಂದು ಎನ್ ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

ಮಂಗಳವಾರ ದೆಹಲಿಯಲ್ಲಿ ಉಪರಾಷ್ಟ್ರಪತಿ ಹುದ್ದೆಗೆ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ವೆಂಕಯ್ಯ ನಾಯ್ಡು ಅವರು, ಉಪರಾಷ್ಟ್ರಪತಿ ಹುದ್ದೆಗೆ ನನ್ನನ್ನು ಅಭ್ಯರ್ಥಿಯಾಗಿ ಆಯ್ಕೆ  ಮಾಡಿರುವುದು ನನಗೆ ಸಿಕ್ಕ ದೊಡ್ಡ ಗೌರವವಾಗಿದೆ. ಆ ಹುದ್ದೆಗೆ ನ್ಯಾಯ ಒದಗಿಸುತ್ತೇನೆ ಎಂಬ ವಿಶ್ವಾಸ ನನಗಿದೆ ಎಂದು ಹೇಳಿದ್ದಾರೆ.

"ಕಳೆದ ನಾಲ್ಕು ದಶಕಗಳಿಂದಲೂ ನಾನು ಸಾರ್ವಜನಿಕ ಸೇವೆಯಲ್ಲಿದ್ದೇನೆ. ಉಪರಾಷ್ಟ್ರಪತಿ ಹುದ್ದೆ ಮತ್ತು ಅದರ ಜವಾಬ್ದಾರಿ ವಿಶೇಷವಾದುದಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ತನ್ನದೇ ಆದ ನೀತಿ ನಿಯಮಗಳಿವೆ. ನೀತಿ  ನಿಯಮಗಳಿಗೆ ಅನುಸಾರವಾಗಿ ಆ ಹುದ್ದೆಗೆ ನಾನು ನ್ಯಾಯ ಒದಗಿಸುತ್ತೇನೆ ಎನ್ನುವ ವಿಶ್ವಾಸ ನನ್ನಲ್ಲಿದೆ" ಎಂದು ವೆಂಕಯ್ಯ ನಾಯ್ಡು ಅವರು ಹೇಳಿದ್ದಾರೆ.

ಇದೇ ವೇಳೆ, ಭಾರತದ ಸೌದರ್ಯ ಮತ್ತು ಸಾಮರ್ಥ್ಯ ಸಂಸತ್ತಿನ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಆಧಾರಿತವಾಗಿದ್ದು, ಇದನ್ನು ಮತ್ತಷ್ಟು ಬಲಪಡಿಸುವ ಪ್ರಯತ್ನ ಮಾಡುತ್ತೇನೆ. ಆಯ್ತೆಯಾದರೆ ಉಪರಾಷ್ಟ್ರಪತಿ ಹುದ್ದೆಯ  ಸಂಪ್ರದಾಯಗಳನ್ನು ಮುಂದುವರೆಸಿಕೊಂಡು ಹೋಗುತ್ತೇನೆ ಮತ್ತು ನಮ್ಮ ಪೂರ್ವಜರು ಉಳಿಸಿ ಹೋಗಿರುವ ಉಪರಾಷ್ಟಪತಿ ಕಚೇರಿಯ ಘನತೆಯನ್ನು ಎತ್ತಿ ಹಿಡಿಯುತ್ತೇನೆ ಎಂದು ನಾಯ್ಡು ಹೇಳಿದ್ದಾರೆ.

ನನ್ನ ಬಿಜೆಪಿ ಪಕ್ಷವೇ ನನ್ನ ತಾಯಿ
ಇದೇ ವೇಳೆ ಪಕ್ಷವನ್ನು ತೊರೆಯುತ್ತಿರುವ ಕುರಿತು ತೀವ್ರ ನೋವು ವ್ಯಕ್ತಪಡಿಸಿದ ವೆಂಕಯ್ಯ ನಾಯ್ಡು ಅವರು, "ನಾನು ನನ್ನ ಚಿಕ್ಕ ವಯಸ್ಸಿನಲ್ಲೇ ನನ್ನ ತಾಯಿಯನ್ನು ಕಳೆದು ಕೊಂದುಕೊಂಡೆ. ನನನ್ನು ಈ ಮಟ್ಟಿಗೆ ಪೋಷಿಸಿ ಬೆಳೆಸಿದ  ನನ್ನ ಪಕ್ಷವೇ ನನ್ನ ಬಿಜೆಪಿ ಪಕ್ಷವೇ ನನ್ನ ತಾಯಿ. ಬಿಜೆಪಿಯನ್ನು ತೊರೆಯುತ್ತಿರುವುದು ನೋವಿನ ಸಂಗತಿಯಾಗಿದೆ ಎಂದು ವೆಂಕಯ್ಯ ನಾಯ್ಡು ಭಾವುಕರಾದರು.

2019ರಲ್ಲೂ ನರೇಂದ್ರ ಮೋದಿ ಅವರೇ ಪ್ರಧಾನಿಯಾಗಬೇಕು
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಕುರಿತು ಮಾತನಾಡಿದ ವೆಂಕಯ್ಯ ನಾಯ್ಡು ಅವರು, .ನನ್ನನ್ನು ಉಪರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾನು ಆಭಾರಿಯಾಗಿರುತ್ತೇನೆ. ನಾನು  ಈಗಾಗಲೇ ನನ್ನ ಸಹೋದ್ಯೋಗಿಗಳಿಗೆ ಹೇಳಿದ್ದೇನೆ. 2019ರ ಲೋಕಸಭಾ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ಪ್ರಧಾನಿಯಾಗಬೇಕು. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದ್ದೇನೆ.

ಈ ವರೆಗೂ ಪಕ್ಷ ನೀಡಿದ  ಯಾವುದೇ ಜವಾಬ್ದಾರಿಯನ್ನು ನನ್ನ ಕರ್ತವ್ಯ ಎಂದು ತಿಳಿದು ಜಬಾಬ್ದಾರಿ ನಿರ್ವಹಿಸಿದ್ದೇನೆ. ಉಪರಾಷ್ಟ್ರಪತಿ ಹುದ್ದೆಗೆ ಆಯ್ಕೆ ಮಾಡಿದಾಗಲೂ ಸಹ ಅದನ್ನೇ ಮಾಡಿದ್ದೇನೆ. ಪಕ್ಷದ ನಿರ್ಧಾರದಂತೆ ಒಪ್ಪಿ ನನ್ನ ಕೇಂದ್ರ ಸಚಿವ ಸ್ಥಾನಕ್ಕೆ  ರಾಜಿನಾಮೆ ನೀಡಿದ್ದೇನೆ. ನಾನು ಈಗ ಬಿಜೆಪಿ ಪಕ್ಷದವನಲ್ಲ. ಆದರೆ ಉಪ ರಾಷ್ಟ್ರಪತಿ ಚುನಾವಣೆ ಇರುವುದರಿಂದ ನನ್ನ ಮತ ಕೂಡ ಗಣನೆಗೆ ಬರುತ್ತದೆ. ಹೀಗಾಗಿ ಓರ್ವ ಸಂಸದನಾಗಿ ಮುಂದುವರೆಯುತ್ತೇನೆ ಎಂದು ನಾಯ್ಡು  ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com