ಮಾತನಾಡಲು ಅವಕಾಶ ನೀಡುತ್ತಿಲ್ಲ, ರಾಜ್ಯಸಭೆಗೆ ರಾಜೀನಾಮೆ ನೀಡುತ್ತೇನೆ: ಮಾಯಾವತಿ

ಜು.18 ರ ರಾಜ್ಯಸಭೆಯ ಕಲಾಪದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಬಿಎಸ್ ಪಿ ನಾಯಕಿ ಮಾಯಾವತಿ ರಾಜ್ಯಸಭೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಹೊರನಡೆದಿದ್ದಾರೆ.
ಮಾಯವತಿ
ಮಾಯವತಿ
ನವದೆಹಲಿ: ಜು.18 ರ ರಾಜ್ಯಸಭೆಯ ಕಲಾಪದಲ್ಲಿ ನಾಟಕೀಯ ಬೆಳವಣಿಗೆ ನಡೆದಿದ್ದು, ಬಿಎಸ್ ಪಿ ನಾಯಕಿ ಮಾಯಾವತಿ ರಾಜ್ಯಸಭೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿ ಹೊರನಡೆದಿದ್ದಾರೆ. 
ಇತ್ತೀಚಿನ ದಿನಗಳಲ್ಲಿ ದಲಿತರ ಮೇಲಿನ ದೌರ್ಜನ್ಯ, ಹಲ್ಲೆ ಪ್ರಕರಣಗಳ ಬಗ್ಗೆ ಮಾತನಾಡಲು ರಾಜ್ಯಸಭೆಯಲ್ಲಿ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿರುವ ಮಾಯಾವತಿ, ದಲಿತರ ಮೇಲಿನ ದೌರ್ಜನ್ಯಗಳ ಬಗ್ಗೆ ಮಾತನಾಡಲು ಅವಕಾಶ ನೀಡದೇ ಇದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಹೇಳಿ ಸಭಾತ್ಯಾಗ ಮಾಡಿ ಹೊರನಡೆದಿದ್ದಾರೆ. 
ಮಾತನಾಡಲು ಅವಕಾಶ ನೀಡಿ ಇಲ್ಲವೇ ರಾಜೀನಾಮೆ ನೀಡುತ್ತೇನೆ ಎಂದು ಮಾಯಾವತಿ ಹೇಳಿದ್ದಾರೆ. ಕೇಂದ್ರ ಸರ್ಕಾರ ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿರುವ ಮಾಯಾವತಿ, ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ದಲಿತರ ಮೇಲೆ, ಬಡವರ ಮೇಲೆ, ಹಿಂದುಳಿದ ವರ್ಗಗಳ ಮೇಲೆ ದೌರ್ಜನ್ಯಗಳು ಹೆಚ್ಚುತ್ತಿವೆ. ಉತ್ತರ ಪ್ರದೇಶದಲ್ಲಿ ಇವಿಎಂ ದುರ್ಬಳಕೆ ಮಾಡುವ ಮೂಲಕ ಬಿಜೆಪಿ ಸರ್ಕಾರ ರಚಿಸಿದೆ ಉತ್ತರ ಪ್ರದೇಶದಲ್ಲಿ ಯಾವುದೇ ಸಮುದಾಯವೂ ಸುರಕ್ಷಿತವಾಗಿಲ್ಲ, ದಲಿತರ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ ಎಂದು ಆರೋಪಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com