ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ಓರ್ವ ಭಾರತೀಯ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ನ ಗಡಿ ನಿಯಂತ್ರ ರೇಖೆ ಬಳಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ನೌಗಾಮ್ ಸೆಕ್ಟರ್ ನ ಗಡಿ ನಿಯಂತ್ರ ರೇಖೆ ಬಳಿ ಪಾಕಿಸ್ತಾನ ಸೇನೆ ಮಂಗಳವಾರ ಮತ್ತೆ ಕದನ ವಿರಾಮ ಉಲ್ಲಂಘಿಸಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಕುಪ್ವಾರ ಜಿಲ್ಲೆಯ ನೌಗಾಮ್ ಸೆಕ್ಚರ್ ನಲ್ಲಿ ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿರುವುದಾಗಿ ರಕ್ಷಣಾ ಮೂಲಗಳು ತಿಳಿಸಿವೆ.
ನಿನ್ನೆ ರಾಜೌರಿ ಜಿಲ್ಲೆಯ ಉರಿಯಲ್ಲಿ ಪಾಕಿಸ್ತಾನ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಹಾಗೂ ಓರ್ವ ಬಾಲಕಿ ಮೃತಪಟ್ಟಿದ್ದರು. ಇಂದು ಮತ್ತೆ ಕದನ ವಿರಾಮ ಉಲ್ಲಂಘಿಸಿರುವ ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುತ್ತಿದೆ.
ಇಂದು ಬೆಳಗ್ಗೆಷ್ಟೇ ಪಾಕಿಸ್ತಾನ ಸೇನೆ ಪೂಂಚ್ ಮತ್ತು ನೌಶೆರಾ ಸೆಕ್ಟರ್ ನಲ್ಲಿ ಅಪ್ರಚೋದಿತ ಗುಂಡಿನ ದಾಳಿ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com