1984ರ ಸಿಖ್ ವಿರೋಧಿ ದಂಗೆ: ಸಜ್ಜನ್ ಕುಮಾರ್ ಗೆ ದೆಹಲಿ ಹೈಕೋರ್ಟ್ ನೋಟಿಸ್

1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್...
ಸಜ್ಜನ್ ಕುಮಾರ್
ಸಜ್ಜನ್ ಕುಮಾರ್
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ. ಜಾಮೀನು ರದ್ದು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ.
ಸಜ್ಜನ್ ಕುಮಾರ್ ಅವರಿಗೆ ವಿಚಾರಣಾ ಕೋರ್ಟ್ ನೀಡಿರುವ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಿವಂತೆ ಕೋರಿ ವಿಶೇಷ ತನಿಖಾ ತಂಡ(ಎಸ್ಐಟಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಐಎಸ್ ಮೆಹ್ತಾ ಅವರು, ಪ್ರತಿಕ್ರಿಯೆ ಸಲ್ಲಿಸುವಂತೆ ಕಾಂಗ್ರೆಸ್ ನಾಯಕನಿಗೆ ನೋಟ್ ಜಾರಿ ಮಾಡಿ ವಿಚಾರಣೆಯನ್ನು ನವೆಂಬರ್ 10ಕ್ಕೆ ಮುಂದೂಡಿದ್ದಾರೆ.
ಮೂವರು ಸಿಖ್ಖರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣಾ ಕೋರ್ಟ್ ಸಜ್ಜನ್ ಕುಮಾರ್ ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಆದರೆ ಎಸ್ ಐಟಿ ಈ ಆದೇಶ ಕಾನೂನು ಬಾಹಿರ ಎಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದೆ.
ಕಳೆದ ವರ್ಷ ಡಿಸೆಂಬರ್ 21ರಂದು ಸಜ್ಜನ್ ಕುಮಾರ್ ಅವರಿಗೆ ದ್ವಾರಕಾ ಕೋರ್ಟ್ ವೈಯಕ್ತಿಕ ಬಾಂಡ್, 1 ಲಕ್ಷ ರುಪಾಯಿ ಶ್ಯೂರಿಟಿ ಮೇಲೆ ಜಾಮೀನು ನೀಡಿತ್ತು. ಅಲ್ಲದೆ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com