

ಜೈಪುರ: ರಾಜಸ್ತಾನದಲ್ಲಿ ಮಂಗಳವಾರ ರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ದ್ವಿಚಕ್ರ ವಾಹನ ಬಿಡಿಭಾಗಗಳ ಅಂಗಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಬ್ಬರು ಸಜೀವ ದಹನವಾಗಿದ್ದಾರೆ ಎಂದು ತಿಳಿದುಬಂದಿದೆ.
ರಾಜಸ್ತಾನದ ಕೋಟಾದಲ್ಲಿ ಕಳೆದ ತಡರಾತ್ರಿಯಲ್ಲಿ ಈ ಘಟನೆ ಸಂಭವಿಸಿದ್ದು, ದುರಂತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಎಂದು ಹೇಳಲಾಗುತ್ತಿದೆ. ಇನ್ನು ಘಟನೆಯಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಮೂವರು ಚಿಂತಾಜನಕ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅಂಗಡಿಯಲ್ಲಿ ಇತ್ತು ಎನ್ನಲಾಗುತ್ತಿರುವ 7 ಸಿಲಿಂಡರ್ ಗಳೂ ಕೂಡ ಸ್ಫೋಟವಾಗಿರುವುದು ಅಗ್ನಿ ದುರಂತದ ಭೀಕರತೆಯನ್ನು ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾಯಕದಲ್ಲಿ ತೊಡಗಿದ್ದು, ಸತತ ಕಾರ್ಯಾಚರಣೆ ನಡೆಸುತ್ತಿದ್ದಾರೆ.