ಹಿಮಾಚಲ ಪ್ರದೇಶ: ಬಸ್ಸು ಕಂದಕಕ್ಕೆ ಉರುಳಿ ಬಿದ್ದು 28 ಪ್ರಯಾಣಿಕರು ಸಾವು

ಹಿಮಾಚಲ ಪ್ರದೇಶದ ಸೋಲನ್ ಗೆ ತೆರಳುತ್ತಿದ್ದ ಖಾಸಗಿ ಬಸ್ಸು ರಾಂಪುರ ಹತ್ತಿರ...
ಕಂದಕಕ್ಕೆ ಉರುಳಿ ಬಿದ್ದ ಬಸ್
ಕಂದಕಕ್ಕೆ ಉರುಳಿ ಬಿದ್ದ ಬಸ್
Updated on
ಶಿಮ್ಲಾ(ಹಿಮಾಚಲ ಪ್ರದೇಶ): ಹಿಮಾಚಲ ಪ್ರದೇಶದ ಸೋಲನ್ ಗೆ ತೆರಳುತ್ತಿದ್ದ ಖಾಸಗಿ ಬಸ್ಸು ರಾಂಪುರ ಹತ್ತಿರ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 28 ಮಂದಿ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಇಂದು ಬೆಳಗ್ಗೆ ಸುಮಾರು 9.15ಕ್ಕೆ ಈ ಘಟನೆ ಸಂಭವಿಸಿದೆ. ಸುಮಾರು 40 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ಸು ಶಿಮ್ಲಾದಿಂದ ಕಿನ್ನೌರ್ ಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 5ರಲ್ಲಿ ಕೆಳಗೆ ಉರುಳಿ ಕಂದಕಕ್ಕೆ ಬಿದ್ದಿತು.
ಸುತ್ತಮುತ್ತಲಿನ ನಾಗರಿಕರು ಮತ್ತು ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು ಗಾಯಗೊಂಡ 7 ಮಂದಿಯನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com