ನಿಯೋಜಿತ ರಾಷ್ಟ್ರಪತಿ ಕೋವಿಂದ್ ಅವರಿಗೆ ಮೀರಾ ಕುಮಾರ್ ಶುಭಾಶಯ

ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಶುಭಾಶಯ ತಿಳಿಸಿದ್ದಾರೆ...
ಮೀರಾ ಕುಮಾರ್
ಮೀರಾ ಕುಮಾರ್
Updated on
ನವದೆಹಲಿ: ದೇಶದ 14ನೇ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದ್ ಅವರಿಗೆ ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಶುಭಾಶಯ ತಿಳಿಸಿದ್ದಾರೆ. 
ವಿಪಕ್ಷಗಳಿಂದ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿದ್ದ ಮೀರಾ ಕುಮಾರ್ ಅವರು ಕೋವಿಂದ್ ವಿರುದ್ಧ 4 ಲಕ್ಷದ ಅಂತರದ ಮತಗಳಿಂದ ಸೋಲು ಕಂಡಿದ್ದಾರೆ. ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮೀರಾ ಕುಮಾರ್ ಅವರು ಮೊದಲಿಗೆ ಕೋವಿಂದ್ ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು. ಕೋವಿಂದ್ ಅವರ ಮುಂದಿನ ದಾರಿ ಸುಗಮವಾಗಲಿ ಎಂದು ಹಾರೈಸಿದರು. ಇದೇ ವೇಳೆ ನನ್ನ ಸೋಲಿನೊಂದಿಗೆ ಬಿಜೆಪಿ ಸಿದ್ಧಾಂತದ ವಿರುದ್ಧ ನನ್ನ ಸಮರ ಇಲ್ಲಿಗೆ ಮುಗಿಯುವುದಿಲ್ಲ. ಜಾತ್ಯಾತೀತತೆಯ ಪರ ನನ್ನ ಹೋರಾಟ ನಿರಂತರವಾಗಿರುತ್ತದೆ ಎಂದು ಹೇಳಿದ್ದಾರೆ. 
ರಾಷ್ಟ್ರಪತಿ ಚುನಾವಣಾ ಅಭ್ಯರ್ಥಿಯಾಗಿ ಆಯ್ಕೆ ಮಾಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಎಲ್ಲಾ ಮಿತ್ರಪಕ್ಷಗಳಿಗೆ ನನ್ನ ಅಭಿನಂದನೆಗಳು. ನನ್ನ ಸುದೀರ್ಘ ರಾಜಕೀಯ ಬದುಕಿಗೆ ಪ್ರೋತ್ಸಾಹಿಸಿದ ಕಾರ್ಯಕರ್ತರಿಗೂ ನಾನು ಮನಪೂರ್ವಕ ಅಭಿನಂದನೆ ತಿಳಿಸುತ್ತೇನೆ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com