ಗೋ ರಕ್ಷಣೆ ಹೆಸರಿನಲ್ಲಿ ಹಿಂಸಾಚಾರದ ಪ್ರಕರಣಗಳನ್ನು ಉತ್ತೇಜಿಸಬೇಡಿ: ಕೇಂದ್ರ, ರಾಜ್ಯಗಳಿಗೆ ಸುಪ್ರೀಂ

ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಪ್ರಕರಣಗಳನ್ನು ಉತ್ತೇಜಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್
ನವದೆಹಲಿ: ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಪ್ರಕರಣಗಳನ್ನು ಉತ್ತೇಜಿಸದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 
ಇತ್ತೀಚಿನ ದಿನಗಳಲ್ಲಿ ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಸ್ವಯಂ ಪ್ರೇರಿತವಾಗಿ ಸೂಚನೆ ನೀಡಿದ್ದು, ಅಂತಹ ಪ್ರಕರಣಗಳನ್ನು ಉತ್ತೇಜಿಸದಂತೆ ಎಚ್ಚರಿಕೆ ನೀಡಿದೆ. ನ್ಯಾ.ದೀಪಕ್ ಮಿಶ್ರ, ನ್ಯಾ.ಎಎಂ ಖಾನ್ವಿಲ್ಕರ್, ಎಂಎಂ ಶಾಂತನಗೌಡರ್ ಅವರಿದ್ದ ಸುಪ್ರೀಂ ಪೀಠ ಈ ಸೂಚನೆ ನೀಡಿದ್ದು, ಕಾನೂನು ಮತ್ತು ಸುವ್ಯವಸ್ಥೆ ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸೇರಿದ್ದು ಎಂದು ಹೇಳುತ್ತೀರಿ. ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ದೇಶಾದ್ಯಂತ ಎಲ್ಲೂ ನಡೆಯಬಾರದು ಎಂದು ಹೇಳಿದೆ. 
ಇದೇ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಗೋರಕ್ಷಣೆ ಕುರಿತ ಪ್ರಚೋದನಕಾರಿ ವಿಡಿಯೋಗಳನ್ನು ತೆಗೆದುಹಾಕುವುದಕ್ಕೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸಹಕರಿಸಬೇಕು ಎಂದು ಹೇಳಿದೆ. ಸುಪ್ರೀಂ ಕೋರ್ಟ್ ನ ಸೂಚನೆಗೆ ಪ್ರತಿಕ್ರಿಯೆ ನೀಡಿರುವ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್, ಕಾನೂನು ಸುವ್ಯವಸ್ಥೆ ರಾಜ್ಯ ಸರ್ಕಾರದ ವ್ಯಾಪ್ತಿಗೆ ಸೇರಿದ್ದು, ಕೇಂದ್ರ ಸರ್ಕಾರದ ಪಾತ್ರವಿಲ್ಲ. ಆದರೂ ಕೇಂದ್ರ ಸರ್ಕಾರ  ಗೋರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ಹಿಂಸಾಚಾರದ ಪ್ರಕರಣಗಳನ್ನು ಉತ್ತೇಜಿಸುವುದಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com