ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ
ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ

ಅಮೆರಿಕಾ ಮಧ್ಯಪ್ರವೇಶಿಸಿದರೆ ಕಾಶ್ಮೀರ ಸಿರಿಯಾ ಆಗುತ್ತದೆ: ಮೆಹಬೂಬ ಮುಫ್ತಿ

ಕಾಶ್ಮೀರ ವಿವಾದದ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಹೇಳಿಕೆಯನ್ನು....
ಅನಂತ್ ನಾಗ್: ಕಾಶ್ಮೀರ ವಿವಾದದ ಬಗ್ಗೆ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ ಹೇಳಿಕೆಯನ್ನು  ಖಂಡಿಸಿದ ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಅಮೆರಿಕಾ ಅಥವಾ ಬೇರೆ ದೇಶ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಲು ಯತ್ನಿಸಿದರೆ ಕಾಶ್ಮೀರ ಕಣಿವೆ ಸಿರಿಯಾ ಮತ್ತು ಆಫ್ಘಾನಿಸ್ತಾನದಂತಾಗುತ್ತದೆ ಎಂದು ಹೇಳಿದ್ದಾರೆ.
ಚೀನಾ ಮತ್ತು ಅಮೆರಿಕಾ ದೇಶಗಳು ತಮ್ಮ ವಿಷಯವನ್ನು ಮಾತ್ರ ನೋಡಿಕೊಳ್ಳಬೇಕು. ಅದು ಆಫ್ಘಾನಿಸ್ತಾನ, ಸಿರಿಯಾ ಅಥವಾ ಇರಾಕ್ ಆಗಿರಲಿ ಅಲ್ಲಿ ಅಮೆರಿಕಾ ಮಧ್ಯ ಪ್ರವೇಶಿಸಿದ್ದಕ್ಕೆ ಆ ದೇಶಗಳ ಪರಿಸ್ಥಿತಿ ಏನಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಭಾರತ ಮತ್ತು ಪಾಕಿಸ್ತಾನ ದೇಶಗಳ ನಡುವೆ ದ್ವಿಪಕ್ಷೀಯ ಮಾತುಕತೆಯಿಂದ ಮಾತ್ರ ಕಾಶ್ಮೀರ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯ ಎಂದು ಮುಖ್ಯಮಂತ್ರಿ ಮುಫ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.
ಲಾಹೋರ್ ಘೋಷಣೆಯಲ್ಲಿ ಮಾಜಿ ಪ್ರಧಾನಿ ವಾಜಪೇಯಿಯವರು ಹೇಳಿದಂತೆ ಭಾರತ ಮತ್ತು ಪಾಕಿಸ್ತಾನ ಮಾತುಕತೆ ನಡೆಸಿ ಕಾಶ್ಮೀರ ವಿವಾದವನ್ನು ಬಗೆಹರಿಸಬೇಕು. ಸಿರಿಯಾ ಮತ್ತು ಆಫ್ಘಾನಿಸ್ತಾನದಲ್ಲಿ ಏನಾಗಿದೆ ಎಂದು ಫಾರೂಕ್ ಅಬ್ದುಲ್ಲಾ ಅವರಿಗೆ ಗೊತ್ತಿದೆಯೇ ಎಂದು ಕೇಳಿದರು.
ಕಾಶ್ಮೀರ ವಿವಾದ ಬಗೆಹರಿಸಲು ಚೀನಾ, ಅಮೆರಿಕಾದಂತಹ ಮೂರನೇ ದೇಶ ಮಧ್ಯ ಪ್ರವೇಶಿಸಬೇಕೆಂದು ಫಾರೂಕ್ ಅಬ್ದುಲ್ಲಾ ಹೇಳಿದ್ದರು. ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರ ಹೇಳಿಕೆಯನ್ನು ಖಂಡಿಸಿ ಹೀಗೆ ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com