ದೇಶ

ಪ್ರಧಾನಿ ಮೋದಿ ಆಯೋಜಿಸಿರುವ ಔತಣಕೂಟದಲ್ಲಿ ಭಾಗಿಯಾಗಲಿರುವ ನಿತೀಶ್, ಸಂಜೆ ರಾಹುಲ್ ಭೇಟಿ

ಅಧಿಕಾರಾವಧಿ ಪೂರ್ಣಗೊಳಿಸುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಜು.22 ರಂದು ಔತಣ ಕೂಟ ಆಯೋಜಿಸಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್

ಪ್ರಧಾನಿ ಮೋದಿ ಆಯೋಜಿಸಿರುವ ಔತಣಕೂಟದಲ್ಲಿ ಭಾಗಿಯಾಗಲಿರುವ ನಿತೀಶ್, ಸಂಜೆ ರಾಹುಲ್ ಭೇಟಿ
ರಾಹುಲ್ ಗಾಂಧಿ
Published On :
ನವದೆಹಲಿ: ಅಧಿಕಾರಾವಧಿ ಪೂರ್ಣಗೊಳಿಸುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಗೌರವಾರ್ಥವಾಗಿ ಪ್ರಧಾನಿ ನರೇಂದ್ರ ಮೋದಿ ಜು.22 ರಂದು ಔತಣ ಕೂಟ ಆಯೋಜಿಸಿದ್ದು, ಬಿಹಾರ ಸಿಎಂ ನಿತೀಶ್ ಕುಮಾರ್ ಭಾಗವಹಿಸಲಿದ್ದಾರೆ. 
ಔತಣ ಕೂಟದಲ್ಲಿ ಭಾಗಿಯಾಗಲು ನವದೆಹಲಿಗೆ ತೆರಳುತ್ತಿರುವ ನಿತೀಶ್ ಕುಮಾರ್, ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನೂ ಭೇಟಿ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. ಆರ್ ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ಬಿಹಾರದಲ್ಲಿ ಮಹಾಮೈತ್ರಿಯಲ್ಲಿ ಬಿರುಕುಂಟಾಗಿದೆ. ಈ ಬಗ್ಗೆ ರಾಹುಲ್ ಗಾಂಧಿ ಅವರೊಂದಿಗೆ ನಿತೀಶ್ ಕುಮಾರ್ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ. 
ನಿತೀಶ್ ಕುಮಾರ್ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದ ರಾಮ್ ನಾಥ್ ಕೋವಿಂದ್ ಅವರನ್ನು ಬೆಂಬಲಿಸಿದ್ದೂ ಸಹ ಮಹ್ಹಾಮೈತ್ರಿಯಲ್ಲಿ ಬಿರುಕು ಮತ್ತಷ್ಟು ಹೆಚ್ಚಲು ಕಾರಣವಾಗಿತ್ತು. ಈಗ ನಿತೀಶ್ ಕುಮಾರ್ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡುತ್ತಿರುವುದು ಕುತೂಹಲ ಮೂಡಿಸಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.