ದಕ್ಷಿಣ ಚೀನಾ ಸಮುದ್ರ ಕಾರ್ಯಾಚರಣೆಗೆ ಯುಎಸ್ ನೌಕಾಪಡೆಗೆ ಹೆಚ್ಚಿನ ಸ್ವಾತಂತ್ರ್ಯ: ಚೀನಾ ಮೇಲೆ ಹೆಚ್ಚಿನ ಒತ್ತಡ

ದಕ್ಷಿಣ ಚೀನಾ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಲು ಅಮೆರಿಕ ನೌಕಾಪಡೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚಿನ ಸ್ವಾತಂತ್ರ್ಯ ನೀಡಿದ್ದಾರೆ.
ದಕ್ಷಿಣ ಚೀನಾ ಸಮುದ್ರ
ದಕ್ಷಿಣ ಚೀನಾ ಸಮುದ್ರ
ಬೀಜಿಂಗ್: ದಕ್ಷಿಣ ಚೀನಾ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಲು ಅಮೆರಿಕ ನೌಕಾಪಡೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೆಚ್ಚಿನ ಸ್ವಾತಂತ್ರ್ಯ ನೀಡಿದ್ದಾರೆ. 
ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರದಿಂದ ಚೀನಾ ಮೇಲೆ ಒತ್ತಡ ಹೆಚ್ಚಲಿದ್ದು, ಕೃತಕವಾಗಿ ದ್ವೀಪಗಳನ್ನು ನಿರ್ಮಿಸಿ ಸೇನಾ ಪಡೆಯ ಇರುವಿಕೆಯನ್ನು ಹೆಚ್ಚಿಸಿಕೊಳ್ಳಲು ಉದ್ದೇಶಿಸಿದ್ದ ಚೀನಾದ ಯತ್ನಕ್ಕೆ ಹಿನ್ನಡೆಯುಂಟಾಗಿದೆ. ದಕ್ಷಿಣ ಚೀನಾ ಸಮುದ್ರದ ಮೇಲೆ ಹಕ್ಕು ಪ್ರತಿಪಾದಿಸುತ್ತಿರುವ ಚೀನಾಗೆ ಅಮೆರಿಕ ಅಧ್ಯಕ್ಷ ನಡೆ ಸವಾಲಾಗಿ ಪರಿಣಮಿಸಿದ್ದು, ವಿಯೆಟ್ನಾಂ, ಮಲೇಷ್ಯಾ, ಇಂಡೋನೇಷ್ಯಾ, ಫಿಲಿಪೇನ್ಸ್ ಸೇರಿದಂತೆ ಅನೇಕ ರಾಷ್ಟ್ರಗಳು ದಕ್ಷಿಣ ಚೀನಾ ಸಮುದ್ರದ ಮೇಲೆ ಹಕ್ಕು ಪ್ರತಿಪಾದಿಸುತ್ತಿರುವುದರ ನಡುವೆ ಅಮೆರಿಕ ಅಧ್ಯಕ್ಷರು ಅಲ್ಲಿನ ನೌಕಾಪಡೆಗೆ ಹೆಚ್ಚಿನ ಸ್ವಾತಂತ್ರ್ಯ ನೀಡಿರುವುದು ಮಹತ್ವ ಪಡೆದುಕೊಂಡಿದೆ. 
ದಕ್ಷಿಣ ಚೀನಾ ಸಮುದ್ರದಲ್ಲಿ ಕಾರ್ಯಾಚರಣೆ ನಡೆಸಲು ಹೆಚ್ಚಿನ ಸ್ವಾತಂತ್ರ್ಯಕ್ಕಾಗಿ ಅಮೆರಿಕ ರಕ್ಷಣಾ ಕಾರ್ಯದರ್ಶಿ ಜೇಮ್ಸ್ ಎನ್ ಮ್ಯಾಟ್ಟಿಸ್ ಬೇಡಿಕೆ ಇಟ್ಟಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com