

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನ ಮೂಲದ ಉಗ್ರರ ಒಳನುಸುಳುವಿಕೆಯನ್ನು ಭಾರತೀಯ ಸೇನೆ ವಿಫಲಗೊಳಿಸಿದ್ದು, ಓರ್ವ ಉಗ್ರನನ್ನು ಹತ್ಯೆಗೈಯ್ಯುವಲ್ಲಿ ಯಶಸ್ವಿಯಾಗಿದೆ.
ದಕ್ಷಿಣ ಕುಪ್ವಾರ ಜಿಲ್ಲೆಯ ಮಚಿಲ್ ಸೆಕ್ಟರ್ ಬಳಿ ಉಗ್ರರು ಒಳ ನುಸುಳುತ್ತಿರುವುದನ್ನು ಕಂಡ ಯೋಧರು ಗುಂಡಿನ ದಾಳಿ ನಡೆಸಿದ್ದು, ಈ ವೇಳೆ ಓರ್ವ ಉಗ್ರ ಹತನಾಗಿದ್ದಾನೆ. ಮಚಿಲ್ ಸೆಕ್ಟರ್ ಬಳಿ ಶಂಕಾಸ್ಪದ ಚಟುವಟಿಕೆ ನಡೆಯುತ್ತಿದ್ದ ಹಿನ್ನಲ್ಲೆಯಲ್ಲಿ ಆಲ್ಲಿಗೆ ಸೈನಿಕರು ದೌಡಾಯಿಸಿದ್ದು, ಈ ವೇಳೆ ಸೈನಿಕರು ಉಗ್ರರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿಬಂದಿದೆ.
ಘಟನಾ ಸ್ಥಳದಲ್ಲಿ ಸೈನಿಕರು ತೀವ್ರ ಶೋಧ ನಡೆಸುತ್ತಿದ್ದು, ಹೆಚ್ಚುವರಿ ಪಡೆಗಳನ್ನು ಕರೆಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.