ಕಾನೂನು ಚೌಕಟ್ಟಿನಲ್ಲಿಯೇ ಆಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ: ಅಮಿತ್ ಶಾ

ಸಂಧಾನ ಮಾತುಕತೆ ಬಳಿಕ ಕಾನೂನು ಚೌಕಟ್ಟಿನಲ್ಲಿಯೇ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ...
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ
Updated on: 

ನವದೆಹಲಿ: ಸಂಧಾನ ಮಾತುಕತೆ ಬಳಿಕ ಕಾನೂನು ಚೌಕಟ್ಟಿನಲ್ಲಿಯೇ ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶನಿವಾರ ಹೇಳಿದ್ದಾರೆ. 

ರಾಮ ಮಂದಿರ ನಿರ್ಮಾಣ ಕುರಿತಂತೆ ಜೈಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರಾಮ ಮಂದಿರ ನಿರ್ಮಾಣ ಕುರಿತಂತೆ ಪಕ್ಷದ ನಿಲುವು ಸ್ಫಷ್ಟವಾಗಿದೆ. ಕಳೆದ ನಾಲ್ಕು ಲೋಕಸಭಾ ಚುನಾವಣೆಯಲ್ಲಿಯೂ ಮಂದಿರ ನಿರ್ಮಾಣ ಕುರಿತಂದೆ ಭರವಸೆ ನೀಡಿದೆ. ಪರಸ್ಪರ ಸಂಧಾನ ಮಾತುಕತೆಗಳ ಬಳಿಕ ರಾಮ ಮಂದಿರವನ್ನು ಕಾನೂನಿನ ಚೌಕಟ್ಟಿನೊಳಗೆ ಕಟ್ಟಲಾಗುತ್ತದೆ ಎಂದು ಹೇಳಿದ್ದಾರೆ. 

ನಂತರ ಗುಜರಾತ್ ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಕುರಿತಂತೆ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. 182 ಸೀಟುಗಳ ಪೈಕಿ ಬಿಜೆಪಿ 150 ಸೀಟುಗಳನ್ನು  ತನ್ನದಾಗಿಸಿಕೊಳ್ಳಲಿದೆ ಎಂದಿದ್ದಾರೆ. 

ಇದೇ ವೇಳೆ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೆ ಅವರನ್ನು ಕೊಂಡಾಡಿರುವ ಶಾ, ರಾಜಸ್ತಾನ ರಾಜ್ಯದಲ್ಲಿ ನಾಯಕತ್ವ ಬದಲಾಯಿಸುವ ಪ್ರಶ್ನೆಯೇ ಬರುವುದಿಲ್ಲ. ರಾಜ್ಯದಲ್ಲಿ ವಸುಂದರಾ ರಾಜೆ ಆಡಳಿತ ನಡೆಸುತ್ತಿದ್ದು, ಕೇದ್ರದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿದ್ದಾರೆ. ದೇಶದ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com