ಗಡಿಯಲ್ಲಿ ಪಾಕ್ ಉದ್ಧಟತನಕ್ಕೆ ಒಂದೇ ತಿಂಗಳಲ್ಲಿ 9 ಯೋಧರು ಹುತಾತ್ಮ, 2 ನಾಗರಿಕರ ಸಾವು

ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ದಾನದ ಉದ್ಧಟನಕ್ಕೆ ತಿಂಗಳಲ್ಲಿ 9 ಯೋಧರು ಹುತಾತ್ಮರಾಗಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿರವುದಾಗಿ ವರದಿಗಳು ತಿಳಿಸಿವೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ದಾನದ ಉದ್ಧಟನಕ್ಕೆ ತಿಂಗಳಲ್ಲಿ 9 ಯೋಧರು ಹುತಾತ್ಮರಾಗಿದ್ದು, ಇಬ್ಬರು ನಾಗರಿಕರು ಸಾವನ್ನಪ್ಪಿರವುದಾಗಿ ವರದಿಗಳು ತಿಳಿಸಿವೆ. 
ಗಡಿಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಅಪ್ರಚೋದಿತ ಗುಂಡಿನ ದಾಳಿಗೆ ಜುಲೈ ತಿಂಗಳಿನಲ್ಲಿ ಈ ವರೆಗೂ 9 ಯೋಧರು ಸೇರಿದಂತೆ 11 ಮಂದಿ ಸಾವನ್ನಪ್ಪಿದ್ದಾರೆ. ಗಡಿಯಲ್ಲಿ ಪಾಕಿಸ್ತಾನ ಸೇನೆಯ ಗುಂಡಿನ ದಾಳಿಗೆ 16 ಮಂದಿಗೆ ಗಂಭೀರವಾಗಿ ಗಾಯಗಳಾಗಿವೆ. 
ಗಡಿಯಲ್ಲಿನ ನಡೆಯುತ್ತಿರುವ ಗುಂಡಿನ ಕಾಳಗ ಸಾವಿರಾರು ಜನರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಹಲವಾರು ಆಸ್ತಿಪಾಸ್ತಿಗಳಿಗೆ ಹಾನಿಯಾಗಿವೆ. ನಾಗರಿಕರನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಗುಂಡಿನ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಈಗಾಗಲೇ 4,000 ಗ್ರಾಮಸ್ಥರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ. 
ಪ್ರಸಕ್ತ ತಿಂಗಳಿನಲ್ಲಿ ಗಡಿ ನಿಯಂತ್ರ ರೇಖೆ ಬಳಿ ಪಾಕಿಸ್ತಾನ ಹಲವಾರು ಬಾರಿ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಗಡಿ ಮೂಲಕ ಉಗ್ರರನ್ನು ನುಸುಳಿಸುವ ಗುರಿ ಇದಾಗಿದೆ. ಆದರೆ, ಪಾಕಿಸ್ತಾನ ಈ ಪ್ರಯತ್ನಕ್ಕೆ ಭಾರತೀಯ ಸೇನೆ ದಿಟ್ಟ ಉತ್ತರ ನೀಡುವ ಮೂಲಕ ಹಿಮ್ಮೆಟ್ಟುವಂತೆ ಮಾಡುತ್ತಿದೆ ಎಂದು ಹಿರಿಯ ಸೇನಾಧಿಕಾರಿಗಳು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com