ಇರಾಕ್ ವಿದೇಶಾಂಗ ಸಚಿವ ಇಬ್ರಾಹಿಂ ಅಲ್ ಜಫಾರಿಯವರು ಜು.24 ರಿಂದ 28ರವರೆಗೆ ನಾಲ್ಕು ದಿನಗಳ ಭಾರತಕ್ಕೆ ಭೇಟಿ ನೀಡಲಿದ್ದು, ಈ ವೇಳೆ ಸುಷ್ಮಾ ಸ್ವರಾಜ್ ಅವರು ಅಪಹರಣಕ್ಕೊಳಗಾಗಿರುವ ಭಾರತೀಯರ ವಿಚಾರವನ್ನು ಪ್ರಸ್ತಾಪ ಮಾಡಲಿದ್ದಾರೆಂದು ಹೇಳಲಾಗುತ್ತಿದೆ. ಅಲ್ಲದೆ, ವ್ಯಾಪಾರ, ಇಂಧನ, ಸಹಕಾರ ಮತ್ತು ದ್ವಿಪಕ್ಷೀಯ ಸಂಬಂಧ ಬಲವರ್ಥನೆ ಕುರಿತಂತೆಯೂ ಮಾತುಕತೆ ನಡೆಸಲಿದ್ದಾರೆಂದು ವರದಿಗಳು ತಿಳಿಸಿವೆ.