ಈ ವರ್ಷದಲ್ಲಿ ಜಮ್ಮು ಕಾಶ್ಮೀರದ 50 ಯುವಕರು ಉಗ್ರ ಸಂಘಟನೆಗೆ ಸೇರ್ಪಡೆ!

ಈ ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದ 50 ಯುವಕರು ಭಯೋತ್ಪಾದಕ ಸಂಘಟನೆಯನ್ನು ಸೇರಿದ್ದಾರೆ ಎಂಬ ಆಂತಕಕಾರಿ ಮಾಹಿತಿಯನ್ನು ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ...
ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆ
ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆ
ನವದೆಹಲಿ: ಈ ವರ್ಷದಲ್ಲಿ ಜಮ್ಮು ಮತ್ತು ಕಾಶ್ಮೀರದ 50 ಯುವಕರು ಭಯೋತ್ಪಾದಕ ಸಂಘಟನೆಯನ್ನು ಸೇರಿದ್ದಾರೆ ಎಂಬ ಆಂತಕಕಾರಿ ಮಾಹಿತಿಯನ್ನು ಕೇಂದ್ರ ಗೃಹ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 
2017ರ ಮೊದಲ ಆರು ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರದ 50ಕ್ಕೂ ಹೆಚ್ಚು ಯುವಕರು ಹಿಜ್ಬುಲ್ ಮುಜಾಯಿದ್ದೀನ್ ಉಗ್ರ ಸಂಘಟನೆಯನ್ನು ಸೇರಿದ್ದು ಇದರಲ್ಲಿ ದಕ್ಷಿಣ ಕಾಶ್ಮೀರದ ಯುವಕರೇ ಹೆಚ್ಚು ಎಂದು ಅಧಿಕಾರಿಗಳು ಹೇಳಿದ್ದಾರೆ. 
ಗಡಿಯಲ್ಲಿ 220ಕ್ಕೂ ಹೆಚ್ಚು ಉಗ್ರರು ಸಕ್ರಿಯರಾಗಿದ್ದು ಅದರಲ್ಲಿ ಅರ್ಧದಷ್ಟು ಉಗ್ರರು ಕಾಶ್ಮೀರ ಅಥವಾ ಪಾಕಿಸ್ತಾನದ ಪ್ರಜೆಗಳಾಗಿದ್ದಾರೆ. ಇನ್ನು 2016ರಲ್ಲಿ 88 ಕಾಶ್ಮೀರಿ ಯುವಕರು ಉಗ್ರ ಸಂಘಟನೆ ಸೇರಿದ್ದು ಕಳೆದ ಆರು ವರ್ಷಗಳಲ್ಲೇ ಅತಿ ಹೆಚ್ಚು ಎಂದು ಗೃಹ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. 
2010ರಲ್ಲಿ 54 ಕಾಶ್ಮೀರಿ ಯುವಕರು ಭಯೋತ್ಪಾದಕ ಸಂಘಟನೆಯನ್ನು ಸೇರಿದ್ದರು. ನಂತರ ಉಗ್ರ ಸಂಘಟನೆ ಸೇರುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿತ್ತು. 2011ರಲ್ಲಿ 23, 2012ರಲ್ಲಿ 21 ಹಾಗೂ 2013ರಲ್ಲಿ 16 ಮಂದಿ ಯುವಕರು ಮಾತ್ರ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com