ನಾಳೆ 'ಮಿಸೈಲ್ ಮ್ಯಾನ್' ಅಬ್ದುಲ್ ಕಲಾಂ ಸ್ಮಾರಕ ದೇಶಕ್ಕೆ ಸಮರ್ಪಣೆ

ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ, 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು....
ಅಬ್ದುಲ್ ಕಲಾಂ ಸ್ಮಾರಕ
ಅಬ್ದುಲ್ ಕಲಾಂ ಸ್ಮಾರಕ
ರಾಮೇಶ್ವರಂ: ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಶಸ್ತಿ ಪುರಸ್ಕೃತ, 'ಮಿಸೈಲ್ ಮ್ಯಾನ್' ಡಾ. ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಸ್ಮಾರಕವನ್ನು ಗುರುವಾರ ದೇಶಕ್ಕೆ ಸಮರ್ಪಣೆ ಮಾಡಲಾಗುತ್ತಿದೆ.
ರಾಮೇಶ್ವರಂನ ಪೈಕರುಂಬ್‌ನಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(ಡಿಆರ್ ಡಿಒ) ನಿರ್ಮಿಸಿರುವ ಅಬ್ದುಲ್ ಕಲಾಂ ಅವರ ಸ್ಮಾರಕಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.
ಇದೇ ವೇಳೆ ಡಾ.ಎಪಿಜೆ ಅಬ್ದುಲ್ ಕಲಾಂ ಇಂಟರ್ ನ್ಯಾಷನಲ್ ಫೌಂಡೇಷನ್ ನಿರ್ಮಿಸಿರುವ 'ಕಲಾಂ 2020 ವಿಜ್ಞಾನ ವಾಹನ' ಮೊಬೈಲ್ ಮ್ಯೂಸಿಯಂಗೂ ಪ್ರಧಾನಿ ಚಾಲನೆ ನೀಡಲಿದ್ದಾರೆ. 
ಕೇಂದ್ರ ಸರ್ಕಾರ ಸ್ಮಾರಕ ನಿರ್ಮಾಣಕ್ಕಾಗಿ ಒಟ್ಟು 50 ಕೋಟಿ ರುಪಾಯಿ ಮಂಜೂರು ಮಾಡಿದೆ. ಮೊದಲ ಹಂತದಲ್ಲಿ 15 ಕೋಟಿ ರು. ವೆಚ್ಚದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದ್ದು, ಒಟ್ಟು 27 ಸಾವಿರ ಚದರಡಿ ವಿಸ್ತೀರ್ಣದಲ್ಲಿ ಸ್ಮಾರಕ ನಿರ್ಮಾಣವಾಗುತ್ತಿದೆ. 
2017ರ ಜುಲೈ 27ರಂದು ಕಲಾಂ ಅವರ 2ನೇ ಪುಣ್ಯತಿಥಿಯ ಸಂದರ್ಭದಲ್ಲಿ ಸ್ಮಾರಕವನ್ನು ದೇಶಕ್ಕೆ ಸಮರ್ಪಿಸಲಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com