ಮುಂಬೈ; ಮುಂಬೈ ಬಹುಮಹಡಿ ಕಟ್ಟಡ ಕುಸಿತು ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿರುವುದಾಗಿ ಬುಧವಾರ ತಿಳಿದುಬಂದಿದೆ.
ನಿನ್ನೆಯಷ್ಟೇ 4 ಅಂತಸ್ತಿನ ಕಟ್ಟಡವೊಂದು ಮುಂಬೈನ ಫಾಟ್ಕೋಪರ್ ಪ್ರದೇಶದಲ್ಲಿ ಕುಸಿದುಬಿದ್ದಿತ್ತು. ಕಟ್ಟಡ ಕುಸಿದು ಬಿದ್ದ ಪರಿಣಾಮ ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿ ಹಾಕಿಕೊಂಡಿದ್ದರು. ಈ ವರೆಗೂ 17 ಮಂದಿ ಮೃತಪಟ್ಟಿರುವುದ್ದಾರೆಂದು ವರದಿಗಳು ತಿಳಿಸಿವೆ.
ಅವಶೇಷಗಳ ಅಡಿಯಲ್ಲಿ ಮತ್ತಷ್ಟು ಮಂದಿ ಸಿಲುಕಿರುವ ಸಾಧ್ಯತೆ ಇದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಕೆಳಗಿನ ಅಂತಸ್ತಿನಲ್ಲಿ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲಾಗುತ್ತಿತ್ತು. ಇದೇ ಕಟ್ಟಡ ಕುಸಿದು ಬೀಳಲು ಕಾರಣ ಇರಬಹುದು ಎಂದು ಹೇಳಲಾಗುತ್ತಿದೆ.