ಕಳೆದ ಒಂದು ತಿಂಗಳಿನಿಂದ ಜೆಡಿಯು, ಆರ್ ಜೆಡಿ ನಡುವೆ ನಡೆಯುತ್ತಿದ್ದ ಶೀತಲ ಸಮರಕ್ಕೆ ಕೊನೆಗೂ ಸಿಎಂ ನಿತೀಶ್ ಕುಮಾರ್ ಮಂಗಳ ಹಾಡಿದ್ದು, ಜೆಡಿಯು, ಆರ್ ಜೆಡಿ ಮೈತ್ರಿಕೂಟದಿಂದ ಹೊರಬಂದು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಅಂತೆಯೇ ತಮ್ಮ ಹಳೆಯ ಮಿತ್ರ ಬಿಜೆಪಿಯೊಂದಿಗೆ ಸೇರಿ ಮತ್ತೆ ಬಿಹಾರದ ಸಿಎಂ ಆಗಿ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಈಗಾಗಲೇ ಬಿಜೆಪಿ ಪಕ್ಷ ನಿತೀಶ್ ಕುಮಾರ್ ಅವರಿಗೆ ಬೆಂಬಲ ಸೂಚಿಸಿ ಫ್ಯಾಕ್ಸ್ ಮೂಲಕ ಬಿಹಾರ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರಿಗೆ ರವಾನಿಸಿದೆ ಎಂದು ತಿಳಿದುಬಂದಿದೆ.