ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣ ರಾಷ್ಟ್ರ ವ್ಯಾಪ್ತಿ ಚರ್ಚೆ ಹಾಗೂ ಪ್ರತಿಭಟನೆಗೆ ಕಾರಣವಾಗಿದೆ. ಮಧ್ಯಪ್ರದೇಶದ ವೃತ್ತಿಪರ ಶಿಕ್ಷಣ ಅಥವಾ ವ್ಯವಸಾಯಿಕ್ ಪರೀಕ್ಷಾ ಮಂಡಲ್(ವ್ಯಾಪಂ) ಮಧ್ಯಪ್ರದೇಶದ ಸ್ವಾಯತ್ತ ಸಂಸ್ಥೆಯಾಗಿದೆ. 1970ರಲ್ಲಿ ಪ್ರಾರಂಭಗೊಂಡ ಈ ಸಂಸ್ಥೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪರೀಕ್ಷೆಗಳನ್ನು ಆಯೋಜಿಸುತ್ತದೆ. ವೃತ್ತಿ ಶಿಕ್ಷಣ ಪ್ರವೇಶ, ವೈದ್ಯರು, ಕಾನ್‌ಸ್ಟೆಬಲ್, ಶಿಕ್ಷಕರು ಮತ್ತಿತರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಳನ್ನು ಈ ಮಂಡಳಿ ನಡೆಸುತ್ತಿದೆ. ವೈದ್ಯ ಪ್ರವೇಶ ಪರೀಕ್ಷೆಯಲ್ಲಿ ಅಭ್ಯರ್ಥಿಗಳ ಪರವಾಗಿ ಇನ್ನೊಬ್ಬರು ಭಾಗಿಯಾಗಿರುವುದನ್ನು ಗಮನಿಸಿದ ವೈದ್ಯರಾದ ಡಾ. ಆನಂದ್ ರಾಯ್ ಅವರು 2013ರಲ್ಲಿ ಈ ಹಗರಣವನ್ನು ಬಯಲು ಮಾಡಿದ್ದರು. ಅಲ್ಲಿಂದ ವ್ಯಾಪಂ ಸಂಬಂಧಪಟ್ಟಂತೆ ನಿಗೂಢ ಸಾವುಗಳು ಸರಣಿ ಆರಂಭವಾದವು.