ನಾಪತ್ತೆಯಾಗಿರುವ 39 ಭಾರತೀಯರು ಮೃತರಾಗಿದ್ದಾರೆಂದು ನಾನೇಕೆ ನಂಬಬೇಕು?: ಸುಷ್ಮಾ ಸ್ವರಾಜ್
ಇರಾಕ್ ನಲ್ಲಿ ಭಾರತೀಯರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಟೀಕೆಗೆ ಉತ್ತರಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 39 ಭಾರತೀಯರು ಕಾಣೆಯಾಗಿದ್ದಾರೆ ಎಂದ ಮಾತ್ರಕ್ಕೆ ಅವರು ಮೃತಪಟ್ಟಿದ್ದಾರೆ ಎಂದೇಕೆ ನಂಬಬೇಕು ಎಂದು ಪ್ರಶ್ನಿಸಿದ್ದಾರೆ.
ನವದೆಹಲಿ: ಇರಾಕ್ ನಲ್ಲಿ ಭಾರತೀಯರು ನಾಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಟೀಕೆಗೆ ಉತ್ತರಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 39 ಭಾರತೀಯರು ಕಾಣೆಯಾಗಿದ್ದಾರೆ ಎಂದ ಮಾತ್ರಕ್ಕೆ ಅವರು ಮೃತಪಟ್ಟಿದ್ದಾರೆ ಎಂದೇಕೆ ನಂಬಬೇಕು ಎಂದು ಪ್ರಶ್ನಿಸಿದ್ದಾರೆ.
ನಾಪತ್ತೆಯಾಗಿರುವ ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ಇರಾಕ್ ಹೇಳಿಲ್ಲ ಎಂದು ಸುಷ್ಮಾ ಸ್ವರಾಜ್ ಲೋಕಸಭೆಗೆ ತಿಳಿಸಿದ್ದಾರೆ. ಇರಾಕ್ ನಲ್ಲಿ ಭಾರತೀಯರು ಸಾವನ್ನಪ್ಪಿದ್ದಾರೆ ಎಂಬುದಕ್ಕೆ ಈ ವರೆಗೂ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಹಾಗಾದ ಮೇಲೆ ನಾವೇಕೆ ಭಾರತೀಯರು ಮೃತಪಟ್ಟಿದ್ದಾರೆ ಎಂದುಕೊಳ್ಳಬೇಕು ಎಂದು ಸುಷ್ಮಾ ಸ್ವರಾಜ್ ಪ್ರಶ್ನಿಸಿದ್ದಾರೆ.
ಸರಿಯಾದ ಸಾಕ್ಷ್ಯಾಧಾರಗಳಿಲ್ಲದೇ, ಭಾರತೀಯರು ಮೃತಪಟ್ಟಿದ್ದಾರೆ ಎಂದುಕೊಳ್ಳುವುದು ಅಪರಾಧವಾಗಲಿದೆ ಎಂದು ಸುಷ್ಮಾ ಸ್ವರಾಜ್ ಹೇಳಿದ್ದು 6 ಮೂಲಗಳ ಪ್ರಕಾರ ನಾಪತ್ತೆಯಾಗಿರುವ 39 ಭಾರತೀಯರು ಇನ್ನೂ ಜೀವಂತವಾಗಿದ್ದಾರೆ ಎಂದು ತಿಳಿದುಬಂದಿದೆ ಎಂದಿದ್ದಾರೆ.