ಸರ್ಕಾರ ರಚಿಸುವಂತೆ ರಾಜ್ಯಪಾಲರಿಂದ ನಿತೀಶ್ ಗೆ ಅಧಿಕೃತ ಆಹ್ವಾನ!

ಪ್ರಮುಖ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರಿಗೆ ಗುರುವಾರ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಪ್ರತಿಭಟನಾ ನಿರತ ಆರ್ ಜೆಡಿ ಕಾರ್ಯಕರ್ತರು
ಪ್ರತಿಭಟನಾ ನಿರತ ಆರ್ ಜೆಡಿ ಕಾರ್ಯಕರ್ತರು

ಪಾಟ್ನಾ: ಪ್ರಮುಖ ಬೆಳವಣಿಗೆಯಲ್ಲಿ ಬಿಹಾರದಲ್ಲಿ ಸರ್ಕಾರ ರಚನೆ ಮಾಡುವಂತೆ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರಿಗೆ ಗುರುವಾರ ಅಧಿಕೃತ ಆಹ್ವಾನ ನೀಡಿದ್ದಾರೆ ಎಂದು  ತಿಳಿದುಬಂದಿದೆ.

ಆರ್ ಜೆಡಿ ಜೊತೆಗಿನ ಮೈತ್ರಿಯನ್ನು ಕಡಿದುಕೊಂಡು ತಮ್ಮ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ನಿತೀಶ್ ಕುಮಾರ್ ಅವರು ಇದೀಗ ಬಿಜೆಪಿ ಜೊತೆ ಸೇರಿ ಸರ್ಕಾರ ರಚನೆ ಮಾಡುತ್ತಿದ್ದು, ಬಿಜೆಪಿ ಬಿಹಾರ ಘಟಕದ ಮುಖ್ಯಸ್ಥ  ಸುಶೀಲ್ ಕುಮಾರ್ ಮೋದಿ ಅವರು ಉಪ ಮುಖ್ಯಮಂತ್ರಿ ಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪಾಟ್ನಾದಲ್ಲಿರುವ ರಾಜಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇನ್ನು ಕೆಲವೇ  ಕ್ಷಣಗಳಲ್ಲಿ ಪ್ರಮಾಣ ವಚನ ಕಾರ್ಯಕ್ರಮ ನೆರವೇರಲಿದೆ ಎಂದು ಹೇಳಲಾಗುತ್ತಿದೆ.

ಆರ್ ಜೆಡಿ ಕಾರ್ಯಕರ್ತರಿಂದ ವ್ಯಾಪಕ ಪ್ರತಿಭಟನೆ
ಏತನ್ಮಧ್ಯೆ ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಸರ್ಕಾರ ರಚನೆ ಮಾಡುತ್ತಿರುವ ನಿತೀಶ್ ಕುಮಾರ್ ಅವರ ನಿಲುವಿಗೆ ಆರ್ ಜೆಡಿ ಕಾರ್ಯಕರ್ತರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಪಾಟ್ನಾದ ಗಾಂಧಿ ಸೇತು  ರಸ್ತೆಯಲ್ಲಿ ರಸ್ತೆ ತಡೆ ನಡೆಸಿದ ಕಾರ್ಯಕರ್ತರು ನಿತೀಶ್ ಕುಮಾರ್ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ನಡೆಸುತ್ತಿದ್ದಾರೆ. ಅಂತೆಯೇ ಹೆದ್ದಾರಿಗಳಲ್ಲೂ ಆರ್ ಜೆಡಿ ಕಾರ್ಯಕರ್ತರು ಪ್ರತಿಭಟನೆ  ನಡೆಸುತ್ತಿದ್ದು, ರಸ್ತೆ ಸಂಚಾರ ಅಸ್ತವ್ಯಸ್ಥವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com