ಪ್ರಮಾಣ ಪತ್ರ ಸಲ್ಲಿಸುವ ಪ್ರಕ್ರಿಯೆ ಕೈಬಿಡುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರದ ಸಲಹೆ

ಕಾರ್ಯನಿರ್ವಾಹಕ ಮಟ್ಟದ ಹುದ್ದೆಗಳ ಕೆಲಸಗಳಿಗೆ ಸೇರುವವರಿಂದ ಪ್ರಮಾಣ ಪತ್ರ ಸ್ವೀಕರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸಲಹೆ ನೀಡಿದೆ.
ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ
ನವದೆಹಲಿ: ಕಾರ್ಯನಿರ್ವಾಹಕ ಮಟ್ಟದ ಹುದ್ದೆಗಳ ಕೆಲಸಗಳಿಗೆ ಸೇರುವವರಿಂದ ಪ್ರಮಾಣ ಪತ್ರ ಸ್ವೀಕರಿಸುವ ಪ್ರಕ್ರಿಯೆಯನ್ನು ಕೈಬಿಡುವಂತೆ ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸಲಹೆ ನೀಡಿದೆ. 
ಈ ಕುರಿತು ಸಂಸತ್ ಗೆ ಕೇಂದ್ರ ಸರ್ಕಾರ ಮಾಹಿತಿ ನೀಡಿದ್ದು, ಪ್ರಮಾಣ ಪತ್ರ ಸಲ್ಲಿಸುವುದರ ಬದಲಿಗೆ ರಾಜ್ಯ ಸರ್ಕಾರಗಳು ನೇಮಕವಾಗಬೇಕಿರುವ ಅಭ್ಯರ್ಥಿಗಳಿಂದ ಸ್ವಯಂ ದೃಢೀಕರಣ ಪತ್ರ ಸ್ವೀಕರಿಸಲಿ ಎಂದು ಸಲಹೆ ನೀಡಿರುವುದಾಗಿ ಹೇಳಿದೆ. 
ಪ್ರಕ್ರಿಯೆಗಳನ್ನು ಸರಳೀಕರಣಗೊಳಿಸುವ ದೃಷ್ಟಿಯಿಂದ ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಿಗೂ ಇಂತಹದ್ದೊಂದು ಸಲಹೆಯನ್ನು ಕಳಿಸಿದೆ ಎಂದು ಸಿಬ್ಬಂದಿ ನೇಮಕಾತಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ರಾಜ್ಯಸಭೆಗೆ ಲಿಖಿತ ಉತ್ತರ ನೀಡಿದ್ದಾರೆ. ದಾಖಲೆಗಳಿಗೆ ಸಂಬಂಧಿಸಿದಂತೆ ಗಝೆಟೆಡ್ ಅಫಿಡವಿಟ್ ಪಡೆಯುವ ಬದಲು ಸ್ವಯಂ ದೃಢೀಕರಣ ನೀಡುವ ಪ್ರಕ್ರಿಯೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿರುವುದಾಗಿ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com