ಬಿಹಾರ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ ಸ್ವೀಕಾರ

ನಿರೀಕ್ಷೆಯಂತೆಯೇ ಜೆಡಿಯು ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಬಿಜೆಪಿ ಸುಶೀಲ್ ಕುಮಾರ್ ಮೋದಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್
ಪ್ರಮಾಣ ವಚನ ಸ್ವೀಕರಿಸಿದ ನಿತೀಶ್ ಕುಮಾರ್

ಪಾಟ್ನಾ: ನಿರೀಕ್ಷೆಯಂತೆಯೇ ಜೆಡಿಯು ಸಖ್ಯ ತೊರೆದಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದು, ಅವರೊಂದಿಗೆ ಬಿಜೆಪಿ ಸುಶೀಲ್ ಕುಮಾರ್  ಮೋದಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರ್ ಜೆಡಿ ಸ್ನೇಹದಿಂದ ಹೊರ ಬಂದಿ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬೆಂಬಲ ನೀಡಿದ್ದರಿಂದ ಸರ್ಕಾರ ರಚನೆಗೆ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಆಹ್ವಾನಿಸಿದ್ದರು. ಅದರಂತೆ ಇಂದು ಬೆಳಗ್ಗೆ 10 ಗಂಟೆಗೆ  ಪಾಟ್ನಾದ ರಾಜಭವನಕ್ಕೆ ಆಗಮಿಸಿದ ನಿತೀಶ್ ಕುಮಾರ್ ಅವರು, ಹಾಗೂ ಬಿಜೆಪಿಯ ಸುಶೀಲ್ ಕುಮಾರ್ ಮೋದಿ ಅವರು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ನಿತೀಶ್ ಕುಮಾರ್ 6ನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಬಿಹಾರ ರಾಜ್ಯಪಾಲ  ಕೇಸರಿನಾಥ್ ತ್ರಿಪಾಠಿ ಅವರು ಉಭಯ ಮುಖಂಡರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಈ ವೇಳೆ ಬಿಜೆಪಿ ಹಾಗೂ ಜೆಡಿಯುನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತ ಹಾಜರಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com