ಗುಜರಾತ್: ಗುಜರಾತ್ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್ ಹಿರಿಯ ಮುಖಂಡ ಶಂಕರ್ ಸಿಂಗ್ ವಘೇಲಾ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜಿನಾಮೆ ನೀಡಿದ ಬೆನ್ನಲ್ಲೇ ಇದೀಗ ಇನ್ನು ಮೂವರು ಕಾಂಗ್ರೆಸ್ ಶಾಸಕರು ರಾಜಿನಾಮೆ ನೀಡಿದ್ದಾರೆ.
ವಘೇಲಾ ಅವರ ಹತ್ತಿರ ಸಂಬಂಧಿ ಬಲವಂತ್ ಸಿಂಗ್ ರಜಪೂತ್ ಅವರು ಪಕ್ಷದ ಎಲ್ಲಾ ಸದಸ್ಯತ್ವಕ್ಕೂ ರಾಜಿನಾಮೆ ನೀಡಿದ್ದಾರೆ. ಇದೇ ವಿರಂಗಮ್ ಶಾಸಕ ತೇಜಶ್ರೀ ಪಟೇಲ್ ಮತ್ತು ಇನ್ನೋರ್ವ ಸ್ಥಳೀಯ ಶಾಸಕ ಪಿಐ ಪಟೇಲ್ ಅವರು ರಾಜಿನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆಗಳು ಹೆಚ್ಚಾಗಿವೆ.
ಗುಜರಾತ್ ನಲ್ಲಿ ಆಗಸ್ಟ್ 8 ಮತ್ತು 9ರಂದು ಮುಂಗಾರು ಅಧಿವೇಶನ ನಡೆಯಲಿದೆ. ಆಗಸ್ಟ್ 8ರಂದು ರಾಜ್ಯಸಭಾ ಚುನಾವಣೆ ನಡೆಯಲಿದ್ದು ಈ ನಡುವೆ ಕಾಂಗ್ರೆಸ್ ನಾಯಕರು ರಾಜಿನಾಮೆ ನೀಡಿರುವುದು ಕಾಂಗ್ರೆಸ್ ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.