ರಾಜ್ಯಸಭೆ ಚುನಾವಣೆ: ಗುಜರಾತ್ ನಿಂದ ಅಮಿತ್ ಶಾ, ಸೃತಿ ಇರಾನಿ ನಾಮಪತ್ರ ಸಲ್ಲಿಕೆ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್‌ ರಾಜ್ಯಸಭೆಗೆ ಸ್ಪರ್ಧಿಸಿದ್ದು, ಶುಕ್ರವಾರ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆ ಬಳಿಕ ವಿಜಯದ ನಗೆ ಬೀರಿದ ಅಮಿತ್ ಶಾ
ನಾಮಪತ್ರ ಸಲ್ಲಿಕೆ ಬಳಿಕ ವಿಜಯದ ನಗೆ ಬೀರಿದ ಅಮಿತ್ ಶಾ
Updated on: 

ಅಹ್ಮದಾಬಾದ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗುಜರಾತ್‌ ರಾಜ್ಯಸಭೆಗೆ ಸ್ಪರ್ಧಿಸಿದ್ದು, ಶುಕ್ರವಾರ ಗುಜರಾತ್ ಮುಖ್ಯಮಂತ್ರಿ ವಿಜಯ್ ರುಪಾನಿ ಸೇರಿದಂತೆ ಹಲವು ಮುಖಂಡರ ಸಮ್ಮುಖದಲ್ಲಿ ರಾಜ್ಯಸಭಾ ಚುನಾವಣೆಗೆ  ನಾಮಪತ್ರ ಸಲ್ಲಿಸಿದರು.

ಅಮಿತ್ ಶಾ ಅವರೊಂದಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ಬಲ್ವಂತ್ ಸಿಂಗ್ ರಜಪೂತ್ ಅವರೂ ಕೂಡ ನಾಮಪತ್ರ ಸಲ್ಲಿಕೆ ಮಾಡಿದರು. ಪ್ರಸ್ತುತ ಅಮಿತ್ ಶಾ ಸದ್ಯ ಗುಜರಾತ್‌ ನಲ್ಲಿ ಬಿಜೆಪಿ ಶಾಸಕರಾಗಿದ್ದು, ಸರ್ಕೇಜ್  ಕ್ಷೇತ್ರದಿಂದ ಸತತ ನಾಲ್ಕು ಬಾರಿ ಗೆದ್ದಿದ್ದಾರೆ. ಇದೇ ಮೊದಲ ಬಾರಿಗೆ ಅಮಿತ್ ಶಾ ರಾಜ್ಯಸಭೆ ಪ್ರವೇಶಿಸುವ ನಿಟ್ಟಿನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರ ಸಲ್ಲಿಕೆ ವೇಳೆ ಗುಜರಾತ್ ಸಿಎಂ ವಿಜಯ್ ರುಪಾನಿ, ಗುಜರಾತ್ ಬಿಜೆಪಿ ಘಟಕದ ಮುಖ್ಯಸ್ಥರಾದ ಆನಂದಿ ಬೆನ್ ಪಟೇಲ್ ಹಾಗೂ ಇತರೆ ಬಿಜೆಪಿ ಮುಖಂಡರು ಸಾಥ್ ನೀಡಿದರು.

ಗುಜರಾತ್‌ನಿಂದ ಅಮಿತ್ ಶಾ ಮಾತ್ರವಲ್ಲದೇ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕೂಡಾ ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಹಾಲಿ ರಾಜ್ಯಸಭೆ ಸದಸ್ಯರಾಗಿರುವ ಸ್ಮೃತಿ ಇರಾನಿ ಅವರ ಅವಧಿ ಆಗಸ್ಟ್ 18ಕ್ಕೆ ಮುಗಿಯಲಿದೆ. ಈ ಹಿನ್ನೆಲೆಯಲ್ಲಿ  ಮತ್ತೊಂದು ಅವಧಿಗೆ ರಾಜ್ಯಸಭೆ ಸದಸ್ಯರಾಗಲು ಕಣಕ್ಕಿಳಿಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com