ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ: ಕಿರಣ್ ರಿಜಿಜು

ಮಳೆಯ ಆರ್ಭಟ ಹಾಗೂ ಪ್ರವಾಹದಿಂದಾದಿ ತತ್ತರಿಸಿ ಹೋಗಿದ್ದ ಅಸ್ಸಾಂನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಗುರುವಾರ ಹೇಳಿದ್ದಾರೆ...
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು
ನವದೆಹಲಿ: ಮಳೆಯ ಆರ್ಭಟ ಹಾಗೂ ಪ್ರವಾಹದಿಂದಾದಿ ತತ್ತರಿಸಿ ಹೋಗಿದ್ದ ಅಸ್ಸಾಂನಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು ಗುರುವಾರ ಹೇಳಿದ್ದಾರೆ. 
ಅಸ್ಸಾಂ ಪ್ರವಾಹ ಪರಿಸ್ಥಿತಿ ಕುರಿತಂತೆ ಸಂಸತ್ತಿನಲ್ಲಿ ಮಾತನಾಡಿರುವ ಅವರು, ಆಂತರಿ ಕೇಂದ್ರ ಸಚಿವಾಲಯದ ತಂಡಗಳು ಜು.21 ರಿಂದಲೂ ರಾಜ್ಯದ ಪರಿಸ್ಥಿಗಳ ಮೇಲೆ ಕಣ್ಗಾವಲಿರಿಸಿದೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿಯೇ ಸೂಕ್ತ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. 
ರಾಜ್ಯ ವಿಪತ್ತು ನಿರ್ವಹಣಾ ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ ಮೂಲಕ ಕೇಂದ್ರ ಸರ್ಕಾರ ಹಣಕಾಸು ನೆರವನ್ನು ವಿಸ್ತರಣೆ ಮಾಡುತ್ತಿದೆ. ಈಗಾಗಲೇ 2017-2018ನೇ ಸಾಲಿನಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ರೂ.9382.80 ಕೋಟಿ ಮೀಸಲಿರಿಸಿದೆ. ಈ ವರೆಗೂ ರೂ.3387.15 ಕೋಟಿ ಬಿಡುಗಡೆ ಮಾಡಿದೆ. ಇನ್ನುಳಿದ ಹಣವನ್ನು ಶೀಘ್ರದಲ್ಲಿಯೇ ಬಿಡುಗಡೆ ಮಾಡಲಾಗುತ್ತದೆ. ಪ್ರವಾಹದಿಂದಾಗಿ ಬೆಳೆಗಳು ನಾಶಗೊಂಡು ಸಂಕಷ್ಟದಲ್ಲಿರುವ ರೈತರಿಗೆ ಶೀಘ್ರದಲ್ಲಿಯೇ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಮೂಲಕ ಪರಿಹಾರ ಧನವನ್ನು ನೀಡಲಾಗುತ್ತೆದ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com