ಕುತೂಹಲ ಮೂಡಿಸಿದ ಶರದ್ ಯಾದವ್-ರಾಹುಲ್ ಗಾಂಧಿ ಭೇಟಿ

ಆರ್ ಜೆಡಿ ಜೊತೆಗಿನ ಮೈತ್ರಿ ಮುರಿದು ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಿರುವ ನಿತೀಶ್ ಕುಮಾರ್ ಅವರ ನಿಲುವು ಜೆಡಿಯು ಮುಖ್ಯಸ್ಥ ಶರದ್ ಯಾದವ್ ಅವರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಪಾಟ್ನಾ: ಆರ್ ಜೆಡಿ ಜೊತೆಗಿನ ಮೈತ್ರಿ ಮುರಿದು ಬಿಜೆಪಿ ಜೊತೆ ಸರ್ಕಾರ ರಚನೆ ಮಾಡಿರುವ ನಿತೀಶ್ ಕುಮಾರ್ ಅವರ ನಿಲುವು ಜೆಡಿಯು ಮುಖ್ಯಸ್ಥ ಶರದ್ ಯಾದವ್ ಅವರ ಅಸಮಾಧಾನಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ನಿತೀಶ್ ಕುಮಾರ್ ಆರ್ ಜೆಡಿ ಸಖ್ಯ ತೊರೆದ ನಂತರದಿಂದ ಹಿಡಿದು ಇಲ್ಲಿಯವರೆಗೂ ನಿತೀಶ್ ನಿಲುವಿನ ಬಗ್ಗೆ ಶರದ್ ಯಾದವ್ ಒಂದೇ ಒಂದು ಬಾರಿಯೂ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ನಿತೀಶ್ ನಿಲುವಿನಿಂದ ಶರದ್ ಯಾದವ್  ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಇಂಬು ನೀಡುವಂತೆ ನಿನ್ನ ಜೆಡಿಯು ಸಂಸದ ಅನ್ವರ್ ಅಲಿ ಕೂಡ ಬಹಿರಂಗವಾಗಿಯೇ ನಿತೀಶ್ ನಿಲುವನ್ನು ವಿರೋಧಿಸಿದ್ದರು. ಹೀಗಾಗಿ ಇದೀಗ ಜೆಡಿಯುನಲ್ಲೇ  ಆಂತರಿಕ ಭಿನ್ನಮತ ಸ್ಫೋಟಗೊಳ್ಳುವ ಸಾಧ್ಯತೆ ಇದ್ದು, ಪರಿಸ್ಥಿತಿಯನ್ನು ಬಿಜೆಪಿ ಸೂಕ್ಷ್ಮವಾಗಿ ಅವಲೋಕಿಸುತ್ತಿದೆ.

ಅಂತೆಯೇ ಶರದ್ ಯಾದವ್ ಅವರನ್ನು ಸಂತೈಸಲು ಬಿಜೆಪಿ ಕೂಡ ಹರಸಾಹಸ ಪಡುತ್ತಿದ್ದು, ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರಿಗೆ ಸಂಧಾನ ಜವಾಬ್ದಾರಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಅದರಂತೆ ಶೀಘ್ರದಲ್ಲೇ ಅರುಣ್ ಜೇಟ್ಲಿ ಅವರು ಶರದ್ ಯಾದವ್ ಅವರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ. ನಿತೀಶ್ ನಿರ್ಧಾರದ ಬಗ್ಗೆ ಅಸಮಾಧಾನಗೊಂಡಿರುವ ಜೆಡಿಯು ಹಿರಿಯ ನಾಯಕ ಶರದ್ ಯಾದವ್ ಅವರು ಎನ್‌ಡಿಎಗೆ ಬಂದಲ್ಲಿ ಕೇಂದ್ರ ಸಂಪುಟದಲ್ಲಿ ಸ್ಥಾನ ಅಥವಾ ರಾಜ್ಯವೊಂದರ ರಾಜ್ಯಪಾಲರ ಸ್ಥಾನ ನೀಡಲಾಗುತ್ತದೆ ಎಂಬ ವದಂತಿ ಇದೆ.

ಶರದ್ ಯಾದವ್-ರಾಹುಲ್ ಗಾಂಧಿ ಭೇಟಿ
ಈ ವದಂತಿಯ ಮಧ್ಯೆಯೇ ಶರದ್ ಯಾದವ್ ಅವರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ನಿತೀಶ್ ನಿರ್ಧಾರದ ಬಗ್ಗೆ ಜೆಡಿಯುನಲ್ಲಿ ಭಿನ್ನಾಭಿಪ್ರಾಯಗಳಿವೆ ಎಂಬುದನ್ನು ಈ ಭೇಟಿ  ಮತ್ತಷ್ಟು ಬಲಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com