ರೋಸ್ ವ್ಯಾಲಿ ಚಿಟ್ ಫಂಡ್ ಹಗರಣ: ಇಡಿಯಿಂದ 293 ಕೋಟಿ ರು. ಆಸ್ತಿ ಜಪ್ತಿ

ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಾವಿರಾರು ಜನರಿಗೆ ವಂಚಿಸಿದ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ....
ಟಿಎಂಸಿ ಸಂಸದ ಸುದೀಪ್ ಬಂಡೋಪಧ್ಯಾಯ
ಟಿಎಂಸಿ ಸಂಸದ ಸುದೀಪ್ ಬಂಡೋಪಧ್ಯಾಯ
ಕೋಲ್ಕತಾ: ಪಶ್ಚಿಮ ಬಂಗಾಳ ಮತ್ತು ಒಡಿಶಾದಲ್ಲಿ ಸಾವಿರಾರು ಜನರಿಗೆ ವಂಚಿಸಿದ ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ 293 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ.
ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ಕೇಂದ್ರೀಯ ತನಿಖಾ ಸಂಸ್ಥೆ ರೋಸ್ ವ್ಯಾಲಿಗೆ ಸೇರಿದ 293 ಕೋಟಿ ರುಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿ ಆದೇಶ ಹೊರಡಿಸಿದೆ. ಜಾರಿ ನಿರ್ದೇಶನಾಲಯದ ಈ ಕ್ರಮದಿಂದಾಗಿ ಒಟ್ಟಾರೆ 1,950 ಕೋಟಿ ರುಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಿದಂತಾಗಿದೆ.
ಈ ಹೊಸ ಆದೇಶದಲ್ಲಿ 293 ಕೋಟಿ ರುಪಾಯಿ ಮೌಲ್ಯದ ಆಸ್ತಿ ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ 2014ರಲ್ಲಿ ಅಕ್ರಮ ಹಣ ವಹಿವಾಟು ತಡೆ ಕಾಯ್ದೆಯಡಿ ರೋಸ್ ವ್ಯಾಲಿ ಅಧ್ಯಕ್ಷ ಗೌತಮ್ ಕುಂದು ಅವರ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಪ್ರಕರಣ ಸಂಬಂಧ ಕುಂದು, ಟಿಎಂಸಿ ಸಂಸದರಾದ ತಪಸ್ ಪಾಲ್ ಹಾಗೂ ಸುದೀಪ್ ಬಂಡೋಪಧ್ಯಾಯ ಸೇರಿದಂತೆ ಹಲವರನ್ನು ಸಿಬಿಐ ಬಂಧಿಸಿತ್ತು. ಅಲ್ಲದೆ ಈ ಸಂಬಂಧ ಜಾರಿ ನಿರ್ದೇಶನಾಲಯ ಕೋಲ್ಕತಾ ಹಾಗೂ ಭುವನೇಶ್ವರದ ಕೋರ್ಟ್ ಗಳಲ್ಲಿ ಹಲವು ಜಾರ್ಚ್ ಶೀಟ್ ಗಳಲ್ಲಿ ಸಲ್ಲಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com