ಶ್ರೀನಗರ; ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಗುಂಡು ಹಾರಿಸಿರುವ ಉಗ್ರರು ನಂತರ, ಶೋಪಿಯಾನ್ ಜಿಲ್ಲೆಯ ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿರುವ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಕುಲ್ಗಾಂ ಜಿಲ್ಲೆಯ ಯಮ್ರಾಕ್ ಎಂಬಲ್ಲಿ ತಮ್ಮ ಮನೆಯಲ್ಲಿದ್ದ ಪೊಲೀಸ್ ಸಿಬ್ಬಂದಿ ಸಲೀಂ ಯೂಸುಫ್ ಎಂಬುವವರ ಮೇಲೆ ಉಗ್ರರು ಗುಂಡು ಹಾರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ನಂತರ ಗಾಯಗೊಂಡಿದ್ದ ಸಲೀಂ ಅವರನ್ನು ಕೂಡಲೇ ಅನಂತ್ ನಾಗ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದರಂತೆ ಶೋಪಿಯಾನ್ ಜಿಲ್ಲೆಯಲ್ಲಿರುವ ಪೊಲೀಸ್ ಠಾಣೆ ಮೇಲೂ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಪ್ರತಿ ದಾಳಿ ಬಳಿಕ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿದ್ದ ಎಂದು ತಿಳಿಸಿದ್ದಾರೆ.