ನಿತೀಶ್ ಕುಮಾರ್ ಸಂಪುಟ ವಿಸ್ತರಣೆ, 13 ಎನ್ ಡಿಎ ಶಾಸಕರಿಗೆ ಸಚಿವ ಸ್ಥಾನ

ಇತ್ತೀಚಿಗಷ್ಟೇ 6ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ನಿತೀಶ್ ಕುಮಾರ್ ಅವರು...
ನಿತೀಶ್ ಕುಮಾರ್
ನಿತೀಶ್ ಕುಮಾರ್
ಪಾಟ್ನಾ: ಇತ್ತೀಚಿಗಷ್ಟೇ 6ನೇ ಬಾರಿ ಬಿಹಾರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ನಿತೀಶ್ ಕುಮಾರ್ ಅವರು ಶನಿವಾರ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, ಬಿಜೆಪಿ ನೇತೃತ್ವದ ಮಿತ್ರ ಪಕ್ಷ ಎನ್ ಡಿಎ ನ 13 ಶಾಸಕರು ಸೇರಿದಂತೆ ಒಟ್ಟು 27 ಶಾಸಕರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡಿದ್ದಾರೆ.
ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲ ಕೇಶರಿನಾಥ್ ತ್ರಿಪಾಠಿ ಅವರು ಜೆಡಿಯುನ 14 ಹಾಗೂ ಎನ್ ಡಿಎನ 13 ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಬಿಜೆಪಿ ನಾಯಕರಾದ ಪ್ರೇಮ್ ಕುಮಾರ್, ನಂದ್ ಕಿಶೋರ್ ಯಾದವ್ ಹಾಗೂ ರಾಮ್ ವಿಲಾಸ್ ಪಾಸ್ವಾನ್ ಅವರ ಕಿರಿಯ ಸಹೋದರ ಪಶುಪತಿ ಪರಾಸ್ ಅವರು ಸೇರಿದಂತೆ ಒಟ್ಟು 27 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕಳೆದ ಬುಧವಾರ ಭ್ರಷ್ಟಾಚಾರ ವಿಚಾರಕ್ಕೆ ಸಂಬಂಧಿಸಿದಂತೆ ದಿಢೀರ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡುವ ಮೂಲಕ ಆರ್ ಜೆಡಿ, ಜೆಡಿಯು, ಕಾಂಗ್ರೆಸ್ ಮಹಾಮೈತ್ರಿಕೂಟದಿಂದ ಹೊರಬಂದಿದ್ದರು. ಅವರು ರಾಜಿನಾಮೆ ನೀಡಿದ ಕೆಲವೇ ಗಂಟೆಗಳಲ್ಲಿ ಬಿಜೆಪಿ ನಿತೀಶ್ ಕುಮಾರ್ ಅವರಿಗೆ ಬೆಂಬಲ ಘೋಷಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com