ಬಿಹಾರ ರಾಜ್ಯವನ್ನು ಲಾಲೂ ಮತ್ತು ಅವರ ಕುಟುಂಬ ಲೂಟಿ ಮಾಡಿದೆ; ನಿತೀಶ್ ಬೆನ್ನಿಗೆ ನಿಂತ ಬಿಜೆಪಿ

Published On :
ನವದೆಹಲಿ: ಭ್ರಷ್ಟಾಚಾರದಲ್ಲಿ ತೊಡಗಿದವರಿಗೆ ಯಾವುದೇ ಕಾರಣಕ್ಕೂ ಬೆಂಬಲ ನೀಡುವುದಿಲ್ಲ ಎಂದು ಹೇಳಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ಬಿಜೆಪಿ ಬೆಂಬಲ ಸೂಚಿಸಿದ್ದು, ರಾಷ್ಟ್ರೀಯ ಜನತಾದಳ ಪಕ್ಷದ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಹಾಗೂ ಅವರು ಕುಟುಂಬಸ್ಥರು ಬಿಹಾರ ರಾಜ್ಯವನ್ನು ಲೂಟಿ ಮಾಡಿದ್ದಾರೆಂದು ಶನಿವಾರ ಹೇಳಿದೆ.
ಜಾತ್ಯಾತೀತತೆ ನಿಮ್ಮ ಭ್ರಷ್ಟಾಚಾರ ಹಾಗೂ ಕೆಟ್ಟ ಕೆಲಸಗಳನ್ನು ಮರೆಮಾಚುವುದಿಲ್ಲ. ಭ್ರಷ್ಟಾಚಾರದಲ್ಲಿ ಯಾರೇ ತೊಡಗಿದರೂ ಅವರಿಗೆ ನಾನು ಬೆಂಬಲ ನೀಡುವುದಿಲ್ಲ ಎಂದು ಈ ಹಿಂತೆ ನಿತೀಶ್ ಕುಮಾರ್ ಅವರು ಹೇಳಿದ್ದರು.
ಈ ಹೇಳಿಕೆ ಬೆಂಬಲ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಅಶ್ವಿನಿ ಕುಮಾರ್ ಚೌಬೆಯವರು, ದೊಡ್ಡ ಮಟ್ಟದಲ್ಲಿ ಆಸ್ತಿ ಹಾಗೂ ಹಣವನ್ನು ಗಳಿಕೆ ಮಾಡಿದ್ದ ಲಾಲೂ ಕುಟುಂಬ ಸದಸ್ಯರ ಮೇಲೆ ಜಾರಿ ನಿರ್ದೇಶನಾಲಯದ ದಾಳಿ ಮಾಡಿತ್ತು. ದಾಳಿ ಬಳಿಕವೂ ತಾವು ಮುಗ್ದರೆಂದು ಹೇಳಿಕೊಂಡಿದ್ದರು. ಒಬ್ಬ ಸಾಮಾನ್ಯ ವ್ಯಕ್ತಿ ಇದ್ದಕ್ಕಿದ್ದಂತೆಯ ಸಾವಿರಾರು ಕೋಟಿ ಹಣಕ್ಕೆ ಮಾಲೀಕನಾಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಪ್ರಜಾಪ್ರಭುತ್ವ ಹಾಗೂ ರಾಜಕೀಯ ಪಕ್ಷಗಳಿರುವುದು ಜನರ ಸೇವೆ ಮಾಡುವುದಕ್ಕಾಗಿ ಇವೆ. ಆದರೆ, ಜನರಿಗೆ ಸೇವೆ ಮಾಡುತ್ತೇನೆಂಬ ಹೆಸರಿನಲ್ಲಿ ಲಾಲೂ ಹಾಗೂ ಅವರ ಕುಟುಂಬಸ್ಥರು ಬಿಹಾರ ರಾಜ್ಯವನ್ನು ಲೂಟಿ ಮಾಡಿದ್ದಾರೆಂದು ಹೇಳಿದ್ದಾರೆ.
ಇದೇ ವೇಳೆ ನಿತೀಶ್ ವಿರುದ್ಧ ಕಿಡಿಕಾರಿದ್ದ ತೇಜಸ್ವಿ ಯಾದವ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ತೇಜಸ್ವಿ ಯಾದವ್ ಅವರು ಮೊದಲು ಈ ಹಿಂದಿದ್ದ ಲಾಲೂ ಆವರ ಆಡಳಿತ ನೆನಪು ಮಾಡಿಕೊಳ್ಳಬೇಕಿದೆ. ಕೇವಲ ಬಿಹಾರ ರಾಜ್ಯದಲ್ಲಿ ಅಷ್ಟೇ ಅಲ್ಲದೆ, ಕೇಂದ್ರ ಸರ್ಕಾರದಲ್ಲೂ ಯಾವ ರೀತಿಯಲ್ಲಿ ಪ್ರಜಾಪ್ರಭುತ್ವದ ಸುಧಾರಣೆಗಳನ್ನು ಒಡೆದಿದ್ದರು ಎಂಬುದನ್ನು ನೆನಪು ಮಾಡಿಕೊಳ್ಳಬೇಕಿದೆ. 1996ರಲ್ಲಿ ಬಹುಮತ ಇಲ್ಲಿದಿದ್ದರೂ, ಯುನೈಟೆಡ್ ಫ್ರಂಟ್ ಎಂಬ ಹೆಸರಿನಲ್ಲಿ ಕೇಂದ್ರದಲ್ಲಿ ಸರ್ಕಾರ ರಚನೆ ಮಾಡಿದ್ದರು ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


