ಎನ್'ಕೌಂಟರ್'ನಲ್ಲಿ ಹಿಜ್ಬುಲ್ ಉಗ್ರರ ಹತ್ಯೆ: ಕಾಶ್ಮೀರದ ಹಲವೆಡೆ ಇಂಟರ್ನೆಟ್ ಸೇವೆ ಸ್ಥಗಿತ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆಸಲಾದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದ ಹಲವೆಡೆ ಇಂಟರ್ನೆಟ್ ಸೇವೆಗಳನ್ನು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆಸಲಾದ ಎನ್ ಕೌಂಟರ್ ನಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕಾಶ್ಮೀರದ ಹಲವೆಡೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ. 
ಹತ್ಯೆಯಾಗಿರುವ ಉಗ್ರರು ಸರ್ಕಾರದ ಅಧಿಕಾರಿಗಳಿಗೆ ಹಾಗೂ ರಾಜಕೀಯ ವ್ಯಕ್ತಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆಂಬ ಮಾಹಿತಿ ತಿಳಿದುಬಂದಿತ್ತು. ಖಚಿತ ಮಾಹಿತಿ ಆಧಾರದ ಮೇರೆಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ತಹಬ್ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದರು. ಕಾರ್ಯಾಚರಣೆ ವೇಳೆ ಶರಣಾಗುವಂತೆ ಉಗ್ರರಿಗೆ ಒಂದು ಅವಕಾಶವನ್ನು ನೀಡಲಾಗಿತ್ತು. ಈ ವೇಳೆ ಉಗ್ರರು ಯೋಧರ ಮೇಲೆಯೇ ಗುಂಡು ಹಾಕಿಸಿದ್ದರು ಎಂದು 12 ರಾಷ್ಟ್ರೀಯ ರೈಫಲ್ಸ್ ಕಮಾಂಡರ್ ಹರ್ಬಿರ್ ಸಿಂಗ್ ಹೇಳಿದ್ದಾರೆ. 
ಪ್ರಸ್ತುತ ತಿಳಿದುಬಂದಿರುವ ಮಾಹಿತಿ ಪ್ರಕಾರ ಪ್ರಸ್ತುತ ಹತ್ಯೆಯಾಗಿರುವ ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರೆಂದು ಹೇಳಲಾಗುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರದಲ್ಲಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಜಮ್ಮು ಮತ್ತು ಕಾಶ್ಮೀರದ ಡಿಜಿಪಿ ಎಸ್.ಪಿ. ವೈದ್ ಅವರು ತಿಳಿಸಿದ್ದಾರೆ. 
ಉಗ್ರರನ್ನು ಹತ್ಯೆ ಮಾಡಿರುವ ಹಿನ್ನಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಯಾವುದೇ ರೀತಿಯ ಹಿಂಸಾಚಾರ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರ ವಹಿಸಿರುವ ಸರ್ಕಾರ ಈಗಾಗಲೇ ಹಲವೆಡೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದೆ ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com