ನವದೆಹಲಿ: ಮಹಾ ಘಟಬಂದನ್ ಮುರಿದುಕೊಂಡು ಬಿಜೆಪಿ ಜೊತೆ ಸೇರಿ ಬಿಹಾರದಲ್ಲಿ ಸರ್ಕಾರ ರಚಿಸಿದ ನಿತೀಶ್ ಕುಮಾರ್ ನಿರ್ಧಾರಕ್ಕೆ ತಮ್ಮ ವಿರೋಧವಿತ್ತು ಎಂದು ಜೆಡಿಯು ಹಿರಿಯ ನಾಯಕ ಶರದ್ ಪವಾರ್ ಹೇಳಿದ್ದಾರೆ.
ಬಿಹಾರದಲ್ಲಿ ಈಗಿನ ರಾಜಕೀಯ ಬೆಳವಣಿಗೆ ದುರದೃಷ್ಟಕರ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳುವ ಮೊದಲು ನಿತೀಶ್ ಕುಮಾರ್ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲ. ಮಹಾಮೈತ್ರಿ ಮುರಿದು ಬಿಜೆಪಿಯೊಂದಿಗೆ ಸಖ್ಯ ಮಾಡಿಕೊಂಡಿರುವುದು ದುರದೃಷ್ಟಕರ.ತಾವಿದನ್ನು ಒಪ್ಪುವುದಿಲ್ಲ ಎಂದಿದ್ದಾರೆ.
ಜನರ ತೀರ್ಮಾನ ಇದಾಗಿರಲಿಲ್ಲ ಎಂದು ಶರದ್ ಯಾದವ್ ಹೇಳಿದ್ದಾರೆಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈ ಹೊಸ ಮೈತ್ರಿಯಿಂದ ರಾಜ್ಯ ಸಭೆಯಲ್ಲಿ ಜೆಡಿಯುಗೆ ಹಿನ್ನಡೆಯಾಗುವ ಸಾಧ್ಯತೆಯಿದೆ.ಅಲ್ಲಿ ಸಂಯುಕ್ತ ಜನತಾದಳದ 10 ಮಂದಿ ಸದಸ್ಯರಿದ್ದಾರೆ.
ಮೊನ್ನೆ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ನಿತೀಶ್ ಕುಮಾರ್ ಬಿಜೆಪಿಯೊಂದಿಗೆ ಹೊಸ ಮೈತ್ರಿ ಮಾಡಿಕೊಂಡು ಮರುದಿನ ಮತ್ತೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ನಂತರ ಮೊನ್ನೆ 29ರಂದು ವಿಧಾನಸಭೆಯಲ್ಲಿ ವಿಶ್ವಾಸಮತ ಗೆದ್ದರು.