ಭ್ರಷ್ಟ ಅಧಿಕಾರಿಗಳ ಪಟ್ಟಿ ತಯಾರಿಸಲು ಇಲಾಖೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿರುವ ಕೇಂದ್ರ ಎನ್ ಡಿಎ ಸರ್ಕಾರ ದೋಷಪೂರಿತ ಅಧಿಕಾರಿಗಳ ಮೇಲೆ...
ಪ್ರಧಾನ ಮಂತ್ರಿ ನರೇಂದ್ರ ಮೋದಿ
ಪ್ರಧಾನ ಮಂತ್ರಿ ನರೇಂದ್ರ ಮೋದಿ
ನವದೆಹಲಿ: ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಲು ಮುಂದಾಗಿರುವ ಕೇಂದ್ರ ಎನ್ ಡಿಎ ಸರ್ಕಾರ ದೋಷಪೂರಿತ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ತೆಗೆದುಕೊಳ್ಳಲು ತಯಾರಿ ನಡೆಸಿದೆ.
ಪ್ರತಿ ಸಚಿವಾಲಯಗಳ ಭ್ರಷ್ಟ ಅಧಿಕಾರಿಗಳ ಪಟ್ಟಿ ತಯಾರಿಸುವಂತೆ ಜಾಗೃತ ಇಲಾಖೆಗೆ ಸೂಚಿಸಲಾಗಿದೆ.ಪಟ್ಟಿಯಲ್ಲಿರುವ ಅಧಿಕಾರಿಗಳ ವಿರುದ್ಧ ಆಗಸ್ಟ್ 15ರ ನಂತರ ಸರ್ಕಾರ ಕ್ರಮ ಕೈಗೊಳ್ಳಲಿದೆ.
ಅಧಿಕಾರಿಗಳ ಸೇವಾ ದಾಖಲೆಗಳ ಆಧಾರದಲ್ಲಿ ಗೃಹ ವ್ಯವಹಾರಗಳ ಸಚಿವಾಲಯ ಭ್ರಷ್ಟ ಅಧಿಕಾರಿಗಳ ಪಟ್ಟಿ ತಯಾರಿಸಲಿದೆ. ಈ ಕುರಿತು ಗೃಹ ಸಚಿವಾಲಯ ಅನೇಕ ಇಲಾಖೆಗಳಿಗೆ ಮತ್ತು ಅರೆಸೇನಾ ಪಡೆಗಳಿಗೆ ಪತ್ರ ಕಳುಹಿಸಿದ್ದು ಮುಂದಿನ ತಿಂಗಳು 5ರೊಳಗೆ ಪಟ್ಟಿಯನ್ನು ಅಂತಿಮಗೊಳಿಸುವಂತೆ ಹೇಳಿದೆ.
ತನಿಖೆ ಮುಗಿಸಿದ ಮತ್ತು ತನಿಖಾ ಹಂತದಲ್ಲಿರುವ ಅಧಿಕಾರಿಗಳ ಹೆಸರುಗಳು ಕೂಡ ಪಟ್ಟಿಯಲ್ಲಿರಲಿವೆ. ಸಮರ್ಥ ಅಧಿಕಾರಿಗಳು ಈ ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ಅನುಮೋದಿಸುತ್ತಾರೆ.
ಭ್ರಷ್ಟ ಅಧಿಕಾರಿಗಳ ಪಟ್ಟಿಯನ್ನು ಸಿಬಿಐ ಮತ್ತು ಕೇಂದ್ರ ಜಾಗೃತ ಆಯೋಗಕ್ಕೆ ಹಸ್ತಾಂತರಿಸಲಾಗುತ್ತದೆ. ಈ ಸಂಸ್ಥೆಗಳು ಇಂತಹ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com