2019 ರಲ್ಲಿ ಮೋದಿಯನ್ನು ಎದುರಿಸುವ ನಾಯಕ ಯಾರೂ ಇಲ್ಲ: ನಿತೀಶ್ ಕುಮಾರ್

ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ, 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಎದುರಿಸುವ ನಾಯಕ ಯಾರೂ ಇಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಹೇಳಿದ್ದಾರೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್
ಪಾಟ್ನಾ: ಆರ್ ಜೆಡಿ, ಕಾಂಗ್ರೆಸ್ ನೊಂದಿಗಿನ ಮಹಾಮೈತ್ರಿಯನ್ನು ತೊರೆದಿರುವ ಬಗ್ಗೆ ಬಿಹಾರ ಸಿಎಂ ನಿತೀಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ ಎಂದು ಹೇಳಿದ್ದಾರೆ. 
ಲಾಲು ಪ್ರಸಾದ್ ಯಾದವ್ ಅವರ ಕುಟುಂಬ ನಡೆಸುತ್ತಿದ್ದ ಭ್ರಷ್ಟಾಚಾರಗಳನ್ನು ತಡೆದುಕೊಳ್ಳಲು ಕಷ್ಟವಾಗುತ್ತಿತ್ತು ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. ಇದೇ ವೇಳೆ ಸಿಬಿಐ ದಾಳಿಗೆ ಸಂಬಂಧಿಸಿದಂತೆಯೂ ಮಾತನಾಡಿರುವ ನಿತೀಶ್ ಕುಮಾರ್, ಸಿಬಿಐ ದಾಳಿ ನಡೆದಿರುವ ಬಗ್ಗೆ ಸ್ಪಷ್ಟನೆ ನೀಡಿ ಎಂದು ಲಾಲು ಪ್ರಸಾದ್ ಯಾದವ್ ಅವರಲ್ಲಿ ಹೇಳಿದ್ದೆ. ಭ್ರಷ್ಟಾಚಾರದ ವಿಷಯ ಎದುರಾದಾಗ ನಾನು ಭ್ರಷ್ಟಾಚಾರವನ್ನು ಸಮರ್ಥಿಸುವುದಕ್ಕೆ ಸಾಧ್ಯವಿಲ್ಲ ಎನಿಸಿ ಮಹಾಮೈತ್ರಿ ತೊರೆಯಲು ತೀರ್ಮಾನಿಸಿದೆ ಎಂದು ನಿತೀಶ್ ಕುಮಾರ್ ಹೇಳಿದ್ದಾರೆ. 
ಮಹಾಮೈತ್ರಿಯನ್ನು ಉಳಿಸಿಕೊಳ್ಳುವ ಸಲುವಾಗಿ ಲಾಲು ಪ್ರಸಾದ್ ಯಾದವ್ ಅವರನ್ನು ತಡೆದುಕೊಂಡಿದ್ದೆ, ಆದರೆ ಭ್ರಷ್ಟಾಚಾರ ಹೆಚ್ಚಿದಂತೆಲ್ಲಾ ಮಹಾಮೈತ್ರಿಯನ್ನು ಉಳಿಸಿಕೊಳ್ಳುವುದು ಕಷ್ಟವಾಯಿತು, ಆದ್ದರಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬೇಕಾಯಿತು ಮಹಾಮೈತ್ರಿ ತೊರೆಯುವುದನ್ನು ಬಿಟ್ಟು ಬೇರೆ ಆಯ್ಕೆ ಇರಲಿಲ್ಲ ಎಂದು ನಿತೀಶ್ ಕುಮಾರ್ ಮಹಾಮೈತ್ರಿಕೂಟವನ್ನು ತೊರೆದಿದ್ದಕ್ಕೆ ಸ್ಪಷ್ಟನೆ ನೀಡಿದ್ದಾರೆ.  
2019 ರಲ್ಲಿ ಮೋದಿಯನ್ನು ಎದುರಿಸುವ ನಾಯಕ ಯಾರೂ ಇಲ್ಲ
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆಯೂ ಮಾತನಾಡಿರುವ ನಿತೀಶ್ ಕುಮಾರ್ 2019 ರಲ್ಲಿ ಪ್ರಧಾನಿ ಮೋದಿ ಅವರನ್ನು ಎದುರಿಸುವ ನಾಯಕ ಯಾರೂ ಇಲ್ಲ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com