ದೇಶ

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ರಚನೆ ಪ್ರಶ್ನಿಸಿ ಆರ್ ಜೆಡಿ ಸಲ್ಲಿಸಿದ್ದ ಆರ್ಜಿ ವಜಾ!

ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರ ರಚನೆ ಪ್ರಶ್ನಿಸಿ ಆರ್ ಜೆಡಿ ಸಲ್ಲಿಸಿದ್ದ ಆರ್ಜಿ ವಜಾ!
ಸಂಗ್ರಹ ಚಿತ್ರ
Published On :

ಪಾಟ್ನಾ: ಬಿಜೆಪಿ ಜೊತೆಗೂಡಿ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರು ರಚನೆ ಮಾಡಿದ್ದ ಸರ್ಕಾರ ಕಾನೂನು ಬಾಹಿರ ಎಂದು ಆರೋಪಿಸಿ ಆರ್ ಜೆಡಿ ಸಲ್ಲಿಸಿದ್ದ ಅರ್ಜಿಯನ್ನು ಸೋಮವಾರ ಪಾಟ್ನಾ ಹೈಕೋರ್ಟ್ ವಜಾ  ಮಾಡಿದೆ.

ಆರ್ ಜೆಡಿ ಸಖ್ಯ ತೊರೆದು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚನೆ ಮಾಡಿದ್ದ ಜೆಡಿಯು ಮುಖಂಡ ನಿತೀಶ್ ಕುಮಾರ್ ಅವರಿಗೆ ಪಾಟ್ಮಾ ಹೈಕೋರ್ಟ್ ನಿಂದ ರಿಲೀಫ್ ಸಿಕ್ಕಿದ್ದು, ಬಿಜೆಪಿ ಜೊತೆಗೂಡಿ ನಿತೀಶ್ ಸರ್ಕಾರ ರಚನೆ  ಮಾಡಿದ್ದನ್ನು ಪ್ರಶ್ನಿಸಿ ಆರ್ ಜೆಡಿ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.

ಆರ್ ಜೆಡಿ ಶಾಸಕ ಸರೋಜ್ ಯಾದವ್ ಹಾಗೂ ಚಂದನ್ ವರ್ಮಾ ಎಂಬುವವರು ಈ ಹಿಂದೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಬಿಹಾರ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ಅವರು ಸಂವಿಧಾನ ಬಾಹಿರವಾಗಿ ಜೆಡಿಯು-ಬಿಜೆಪಿ  ಸರ್ಕಾರ ರಚನೆಗೆ ಅನುವು ಮಾಡಿಕೊಟ್ಟಿದ್ದಾರೆ. ಬಿಹಾರ ವಿಧಾನಸಭೆಯಲ್ಲಿ ಆರ್ ಜೆಡಿ ಪಕ್ಷ 80 ಕ್ಕೂ ಹೆಚ್ಚು ಶಾಸಕರ ಬಲವನ್ನು ಹೊಂದಿದ್ದು, ವಿಧಾನಸಭೆ ದೊಡ್ಡ ಪಕ್ಷವಾಗಿದೆ. ಹೀಗಿದ್ದೂ ಆರ್ ಜೆಡಿ ಪಕ್ಷವನ್ನು ಗಣನೆಗೆ  ತೆಗೆದುಕೊಳ್ಳದೇ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ನಿತೀಶ್ ಕುಮಾರ್ ಹಾಗೂ ಬಿಜೆಪಿ ಮೈತ್ರಿ ಸರ್ಕಾರ ರಚನೆಗೆ ಅನುವು ಮಾಡಿಕೊಟ್ಟಿದ್ದಾರೆ, ಹೀಗಾಗಿ ಈ ಬಗ್ಗೆ ಕೋರ್ಟ್ ಮಧ್ಯ ಪ್ರವೇಶಿಸಬೇಕು ಎಂದು ಅರ್ಜಿಯಲ್ಲಿ  ಮನವಿ ಮಾಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.