ಎನ್'ಕೌಂಟರ್'ನಲ್ಲಿ ಅಬು ದುಜಾನಾ ಹತ್ಯೆ: ಸೇನಾ ಪಡೆಯನ್ನು ಅಭಿನಂದಿಸಿದ ಫರೂಖ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ನಡೆಸಲಾದ ಎನ್'ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಅಬು ದುಜಾನಾ'ನನ್ನು ಹತ್ಯೆ ಮಾಡಿರುವುದಕ್ಕೆ ಭಾರತೀಯ ಸೇನಾ ಪಡೆಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ...
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ
ನವದೆಹಲಿ: ಜಮ್ಮು ಮತ್ತು ಕಾಶ್ಮೀರ ಪುಲ್ವಾಮ ಜಿಲ್ಲೆಯಲ್ಲಿ ನಡೆಸಲಾದ ಎನ್'ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರ ಅಬು ದುಜಾನಾ'ನನ್ನು ಹತ್ಯೆ ಮಾಡಿರುವುದಕ್ಕೆ ಭಾರತೀಯ ಸೇನಾ ಪಡೆಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೂಖ್ ಅಬ್ದುಲ್ಲಾ ಅವರು ಮಂಗಳವಾರ ಅಭಿನಂದನೆ ಸಲ್ಲಿಸಿದ್ದಾರೆ. 
ಈ ಕುರಿತಂತೆ ಮತಾತನಾಡಿರುವ ಅವರು, ರಾಜ್ಯದಲ್ಲಿ ಶಾಂತಿ ನೆಲೆಸುವ ಸಲುವಾಗಿ ಭದ್ರತಾ ಪಡೆಗಳು ಈ ರೀತಿಯ ಉತ್ತಮ ಕೆಲಸಗಳನ್ನು ಮುಂದುವರೆಸುತ್ತದೆ ಎಂಬ ವಿಶ್ವಾಸ ನನಗಿದೆ. ಅಬು ದುಜಾನಾ ಹತ್ಯೆ ಮಾಡಿರುವುದಕ್ಕೆ ಈ ಮೂಲಕ ಭದ್ರತಾ ಪಡೆಗಳಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ತಿಳಿಸಿದ್ದಾರೆ. 
ಕಣಿವೆ ರಾಜ್ಯ ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸುತ್ತಿರುವ ಉಗ್ರ ನಿಗ್ರಹ ಕಾರ್ಯಾಚರಣೆಗೆ ಮಂಗಳವಾರ ಮಹತ್ವದ ಯಶಸ್ಸು ದೊರೆತಿದ್ದು, ಹಲವು ವರ್ಷಗಳಿಂದ ಸೇನೆಗೆ ಚಳ್ಳೆ ಹಣ್ಣು ತಿನ್ನಿಸಿ ಯುವಕರನ್ನು ಉಗ್ರ  ಸಂಘಟನೆಗೆ ಸೆಳೆಯುತ್ತಿದ್ದ ಲಷ್ಕರ್ ಉಗ್ರ ಅಬು ದುಜಾನಾನನ್ನು ಭಾರತೀಯ ಸೇನಾ ಪಡೆ ಗುಂಡಿಕ್ಕಿ ಹತ್ಯೆ ಮಾಡಿದೆ. 
ಕಾಶ್ಮೀರದ ಹಕ್ರೀಪೋರಾ ಗ್ರಾಮದಲ್ಲಿ ಅಡಗಿ ಕುಳಿತಿದ್ದ ಉಗ್ರರನ್ನು ಸುತ್ತುವರೆದ ಸೇನೆ ಇಬ್ಬರೂ ಉಗ್ರರನ್ನು ಸೆದೆಬಡಿಯುವಲ್ಲಿ ಯಶಸ್ವಿಯಾಗಿದೆ. ಹತ್ಯೆಯಾದ ಇಬ್ಬರು ಉಗ್ರರ ಪೈಕಿ ಓರ್ವ ಉಗ್ರನನ್ನು ಅಬು ದುಜಾನಾ ಎಂದು ಗುರ್ತಿಸಲಾಗಿದೆ. 
ಈ ಕುರಿತಂತೆ ಸ್ವತಃ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದು, ಪಾಕಿಸ್ತಾನ ಮೂಲಕ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಕಮಾಂಡರ್ ಅಬು ದುಜಾನಾನನ್ನು ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಹೇಳಿಕೊಕಂಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com