ಇದೇ ಮೊದಲ ಬಾರಿಗೆ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ 'ನೋಟಾ'ಗೆ ಅವಕಾಶ

ಕೇಂದ್ರ ಚುನಾವಣಾ ಆಯೋಗ ಇದೆ ಮೊದಲ ಬಾರಿ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ (None Of The Above) ಬಳಸುವ....
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಇದೆ ಮೊದಲ ಬಾರಿ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ(None Of The Above) ಬಳಸುವ ಅವಕಾಶವನ್ನು ನೀಡಿದೆ.
ಆಗಸ್ಟ್ 8ರಂದು ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಶಾಸಕರು ನೋಟಾ ಆಯ್ಕೆಯನ್ನು ಬಳಸಿಕೊಳ್ಳಬಹುದಾಗಿದೆ.
ಇನ್ನು ಈ ವಿಚಾರವನ್ನು ಇಂದು ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ಆನಂದ್ ಶರ್ಮಾ, ಸದನದ ಗಮನಕ್ಕೆ ತಾರದೆ ಚುನಾವಣಾ ಆಯೋಗ ಗುಜರಾತ್ ರಾಜ್ಯಸಭೆ ಚುನಾವಣೆಯಲ್ಲಿ ನೋಟಾ ಜಾರಿಗೆ ತಂದಿದೆ. ಈ ಮೂಲಕ ಸಂವಿಧಾನ ವಿರೋಧಿ ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ವೇಳೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು ನೀಡಿದ ಉತ್ತರದಿಂದ ಸಮಾಧಾನಗೊಳ್ಳದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಗದ್ದಲ ಸೃಷ್ಟಿಸಿದರು. ಇದರಿಂದಾಗಿ ಕೆಲ ಕಾಲ ಕಲಾಪವನ್ನು ಮುಂದೂಡಲಾಯಿತು.
ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಸಚಿವೆ ಸ್ಮೃತಿ ಇರಾನಿ, ಬಲ್ವಂತ್ ಸಿಂಗ್ ರಜಪುತ್ ಹಾಗೂ ಕಾಂಗ್ರೆಸ್ ನ ಏಕೈಕ ಅಭ್ಯರ್ಥಿ ಅಹ್ಮದ್ ಪಟೇಲ್ ಅವರು ರಾಜ್ಯಸಭಾ ಚುನಾವಣಾ ಕಣದಲ್ಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com