ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ 2-3 ಉಗ್ರರು ದಾಳಿ ನಡೆಸಿದ್ದು, ಉಗ್ರರನ್ನು ಸದೆಬಡಿಯಲು ಭಾರತೀಯ ಸೇನಾ ಪಡೆ ಕಾರ್ಯಾಚರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.
ಪುಲ್ವಾಮ ಜಿಲ್ಲೆಯ ಹಕಿಪೊರಾ ಗ್ರಾಮದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿರುವ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾರ್ಯಾಚರಣೆ ವೇಳೆ ಉಗ್ರರು ಯೋಧರ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದು, ಉಗ್ರರ ವಿರುದ್ಧ ಕಾರ್ಯಾಚರಣೆಯನ್ನು ಚುರುಕುಗೊಳಿಸಿರುವ ಸೇನಾ ಪಡೆ ದಾಳಿಗೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಭಾರೀ ಗುಂಡಿನ ಚಕಮಕಿ ನಡೆಯುತ್ತಿರುವುದಾಗಿ ತಿಳಿದುಬಂದಿದೆ.