ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ವಿರುದ್ಧ ಮಂಗಳವಾರ ತೀವ್ರ ವಾಗ್ದಾಳಿ ನಡೆಸಿರುವ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು, ನಿತೀಶ್ ಕುಮಾರ್ ಒಬ್ಬ ಅವಕಾಶವಾದಿ ರಾಜಕಾರಣಿ. ಸದಾ ಅಧಿಕಾರಕ್ಕಾಗಿ ಹಾತೊರೆಯುತ್ತಾರೆ ಎಂದು ಕಿಡಿ ಕಾರಿದ್ದಾರೆ.
ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಲಾಲು, ನಿತೀಶ್ ಕುಮಾರ್ ಮೇಲೆ ನಮಗೆ ಮೊದಲಿನಿಂದಲೂ ವಿಶ್ವಾಸ ಇರಲಿಲ್ಲ. ಅವರು ಅಧಿಕಾರಕ್ಕಾಗಿ ಯಾವಾಗಬೇಕಾದರೂ ತಮ್ಮ ನಿಲುವನ್ನು ಮತ್ತು ನಿಷ್ಠೆಯನ್ನು ಬದಲಿಸುತ್ತಾರೆ ಎಂದರು ಆರೋಪಿಸಿದರು.
ಕೆಲವು ದಿನಗಳ ಹಿಂದಷ್ಟೇ ನಿತೀಶ್ ಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕಟುವಾಗಿ ಟೀಕಿಸಿದ್ದರು. ಈಗ 2019ರ ಚುನಾವಣೆಯಲ್ಲಿ ಅವರನ್ನು ಎದುರಿಸುವ ನಾಯಕ ಇಲ್ಲ ಎಂದು ಹಾಡಿ ಹೊಗಳುತ್ತಿದ್ದಾರೆ ಎಂದು ಲಾಲು ವಾಗ್ದಾಳಿ ನಡೆಸಿದರು.
ನಾನು ನಿತೀಶ್ ಕುಮಾರ್ ಗಿಂತ ಹಿರಿಯ. ಅವರು ಜನ ನನಗೆ ಮತ ನೀಡಿದ್ದಾರೆ ಎಂದು ಹೇಳುತ್ತಿದ್ದಾರೆ. ಇದನ್ನು ಹೇಳುವುದಕ್ಕೆ ಅವರಿಗೆ ನಾಚಿಕೆಯಾಗುವುದಿಲ್ಲವೇ? ಎಂದು ಬಿಹಾರ ಮಾಜಿ ಸಿಎಂ ಪ್ರಶ್ನಿಸಿದ್ದಾರೆ.