ಮಣ್ಣು ಖರೀದಿ ಹಗರಣ: ಆರ್'ಜೆಡಿಗೆ ಮತ್ತೆ ಸಂಕಷ್ಟ, ಲಾಲು ಪುತ್ರನ ವಿರುದ್ಧ ತನಿಖೆಗೆ ಆದೇಶಿಸಿದ ಸಿಎಂ ನಿತೀಶ್

ಅಕ್ರಮಗಳ ಸುಳಿಯಲ್ಲಿ ಸಿಲಿಕು ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿರುವ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಟ...
ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜ್ ಪ್ರತಾಪ್ ಯಾದವ್ (ಸಂಗ್ರಹ ಚಿತ್ರ)
ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಪುತ್ರ ತೇಜ್ ಪ್ರತಾಪ್ ಯಾದವ್ (ಸಂಗ್ರಹ ಚಿತ್ರ)
Updated on: 

ಪಾಟ್ನ: ಅಕ್ರಮಗಳ ಸುಳಿಯಲ್ಲಿ ಸಿಲಿಕು ಈಗಾಗಲೇ ಸಾಕಷ್ಟು ಸಂಕಷ್ಟಗಳನ್ನು ಎದುರಿಸುತ್ತಿರುವ ರಾಷ್ಟ್ರೀಯ ಜನತಾದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕುಟುಂಬಕ್ಕೆ ಇದೀಗ ಮತ್ತೊಂದು ಸಂಕಟ ಎದುರಾಗಿದ್ದು, ಮೃಗಾಲಯ ಮಣ್ಣು ಖರೀದಿ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರದ ನೂತನ ಎನ್ ಡಿಎ ಸರ್ಕಾರ ತನಿಖೆಗೆ ಆದೇಶಿಸಿದೆ.

 
ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್ ಅವರು ಈ ಹಿಂದೆ ಪರಿಸರ ಹಾಗೂ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಪಾಟ್ನಾದ ಸಂಜಯ್ ಗಾಂಧಿ ಜಯೋಲಾಜಿಕಲ್ ಪಾರ್ಕ್'ನಲ್ಲಿ ಮಣ್ಣು ಖರೀದಿ ಹಗರಣ ನಡೆದಿದೆ ಎಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಬಿಹಾರ ರಾಜ್ಯ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತನಿಖೆಗೆ ಆದೇಶಿಸಿದ್ದಾರೆ. 

ಈ ಹಿಂದೆ ಪ್ರತಿಪಕ್ಷ ನಾಯಕರಾಗಿದ್ದ ಹಾಗೂ ಹಾಲಿ ಉಪ ಮುಖ್ಯಮಂತ್ರಿಯಾಗಿರುವ ಸುಶೀಲ್ ಕುಮಾರ್ ಮೋದಿಯವರು ತೇಜ್ ಪ್ರತಾಪ್ ಅವರ ವಿರುದ್ಧ ಮಣ್ಣು ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು. 

ಸಗುಣ ಮೋರ್ ಸಮೀಪ ನಿರ್ಮಾಣವಾಗುತ್ತಿರುವ ನೂತನ ಮಾಲ್ ಒಂದರ ಬೇಸ್ ಮೆಂಟ್ ಗಾಗಿ ಅಗೆದ ಮಣ್ಣನ್ನು ಯಾವುದೇ ಟೆಂಡರ್ ಕರೆಯದೆ ಪಾಟ್ನ ಮೃಗಾಲಯ ರೂ.90 ಲಕ್ಷಕ್ಕೆ ಖರೀದಿ ಮಾಡಿತ್ತು. ತೇಜ್ ಪ್ರತಾಪ್ ಅವರು ಪರಿಸರ ಹಾಗೂ ಅರಣ್ಯ ಸಚಿವರಾಗಿದ್ದ ಅವಧಿಯಲ್ಲಿ ಹಗರಣ ನಡೆದಿತ್ತು. ಲಾಲು ಪ್ರಸಾದ್ ಯಾದವ್ ಅವರ ಪುತ್ರರಾದ ತೇಜಸ್ವಿ ಪ್ರಸಾದ್ ಯಾದವ್ ಮತ್ತು ತೇಜ್ ಪ್ರತಾಪ್ ಯಾದವ್ ನಿರ್ದೇಶಕರಾಗಿರುವ ಡಿಲೈಟ್ ಮಾರ್ಕೆಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್'ಗೆ ಸೇರಿದ ಮಾಲ್ 2 ಎಕರೆ ಜಾಗದಲ್ಲಿ ನಿರ್ಮಾಣಗೊಳ್ಳುತ್ತಿದೆ ಎಂದು ಆರೋಪಿಸಿದ್ದರು.

ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಮಣ್ಣು ಖರೀದಿಗೆ ಅನುಸರಿಸಿದ ವಿಧಾನಗಳ ಕುರಿತಂತೆ ದಾಖಲೆಗಳನ್ನು ಸಲ್ಲಿಸುವಂತೆ ಮುಖ್ಯ ಕಾರ್ಯದರ್ಶಿ ಅಂಜನಿ ಕುಮಾರ್ ಸಿಂಗ್ ಅವರು ಅರಣ್ಯ ಇಲಾಖೆಗೆ ಏ.6 ರಂದು ಆದೇಶಿಸಿದ್ದರು.  ನಂತರ ಹೇಳಿಕೆ ನೀಡಿದ್ದ ಅಂಜನಿಯವರು ಪಾಟ್ನ ಮೃಗಾಲಯ ಮಣ್ಣು ಖರೀದಿ ವ್ಯವಹಾರದಲ್ಲಿ ಯಾವುದೇ ರೀತಿಯ ಹಗರಣ ನಡೆದಿರುವುದು ಮೇಲ್ಟೋಟಕ್ಕೆ ಸಾಬೀತಾಗಿಲ್ಲ. ಹಗರಣ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com