ಉಗ್ರರ ವಿರುದ್ಧದ ಕಾರ್ಯಾಚರಣೆ ಅಂತ್ಯ; ಕಾಶ್ಮೀರದ ಹಲವೆಡೆ ಕಲ್ಲು ತೂರಾಟ
ಪುಲ್ವಾಮ ಜಿಲ್ಲೆಯಲ್ಲಿ ಲಷ್ಕರ್-ಇ-ತೊಯ್ಬಾ ಸಂಘಟನೆಯ ಉಗ್ರರ ವಿರುದ್ದ ನಡೆಸಲಾಗುತ್ತಿದ್ದ ಕಾರ್ಯಾಚರಣೆಯನ್ನು ಸೇನಾ ಪಡೆ ಅಂತ್ಯಗೊಳಿಸಿರುವ ಬೆನ್ನಲ್ಲೇ ಇದೀಗ ಕಾಶ್ಮೀರದ ಹಲವೆಡೆ ಕಲ್ಲು ತೂರಾಟ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ.
ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಕೆಲ ಸ್ಥಳೀಯರು ಸೇನಾಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಕಲ್ಲುತೂರಾಟಗಾರರನ್ನು ಚದುರಿಸುವ ಸಲುವಾಗಿ ಭದ್ರತಾ ಪಡೆಗಳು ಗಾಳಿಯಲ್ಲು ಗುಂಡು ಹಾಗೂ ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ನಾಗರಿಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಎನ್ ಕೌಂಟರ್ ಕುರಿತಂತೆ ಮಾಹಿತಿ ನೀಡಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿ ಎಸ್.ಪಿ.ವೈದ್ ಅವರು, ಎನ್ ಕೌಂಟರ್ ನಡೆದ ಸ್ಧಳದಲ್ಲಿ ಉಗ್ರರ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಮೃತದೇಹಗಳು ದೊರಕಿದ ಬಳಿಕವಷ್ಟೇ ಉಗ್ರರ ಗುರ್ತಿಕೆ ಕುರಿತಂತೆ ಮಾಹಿತಿ ನೀಡಲಾಗುತ್ತದೆ ಎಂದಿದ್ದಾರೆ.