ದಾಳಿ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಲಂಡನ್ ನಲ್ಲಿ ನಡೆದ ಉಗ್ರರ ದಾಳಿ ಆಘಾತ ಹಾಗೂ ದುಃಖವನ್ನು ತಂದಿದೆ. ದಾಳಿಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮೃತರ ಕುಟುಂಬಕ್ಕೆ ಸಂತಾಪವನ್ನು ಸೂಚಿಸುತ್ತೇವೆ, ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇವೆಂದು ತಿಳಿಸಿದ್ದಾರೆ.