ಆರ್ ಎಸ್ ಎಸ್ ಮತ್ತು ಮೋದಿ ಐಡಿಯಾವನ್ನು ಹೇರಲು ಬಿಡುವುದಿಲ್ಲ: ರಾಹುಲ್ ಗಾಂಧಿ
ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ ಎಸ್ ತತ್ವ ಸಿದ್ಧಾಂತಗಳನ್ನು ದೇಶದ ಮೇಲೆ ಹೇರಲು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಬಿಡುವುದಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ...

Published On :
ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಮತ್ತು ಆರ್ ಎಸ್ ಎಸ್ ತತ್ವ ಸಿದ್ಧಾಂತಗಳನ್ನು ದೇಶದ ಮೇಲೆ ಹೇರಲು ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಬಿಡುವುದಿಲ್ಲ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಅವರ 94ನೇ ಹುಟ್ಟುಹಬ್ಬದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಕೋಟ್ಯಾಂತರ ಮಂದಿಯ ಧ್ವನಿಯನ್ನು ಮೌನವಾಗಿಸಲು ನಾವು ಬಿಡುವುದಿಲ್ಲ. ನಾವೆಲ್ಲ ವೇದಿಕೆ ಮೇಲಿದ್ದೇವೆ, ಜನರೆಲ್ಲಾ ಗುಂಪಿನಲ್ಲಿದ್ದಾರೆ, ಇದನ್ನೆಲ್ಲಾ ನೋಡುತ್ತಿರುವ ನಾವು ನರೇಂದ್ರ ಮೋದಿ ದೇಶದ ಮೇಲೆ ಒಂದೇ ಐಡಿಯಾ ಹೇರಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.
ತಮ್ಮ ಪಕ್ಷದ ಮುಖವಾಣಿ ಮುರಸೋಳಿಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಪತ್ರ ಬರೆದಿದ್ದರು, ಅವರು ಭ್ರಮೆಯಲ್ಲಿ ಪತ್ರ ಬರೆದಿರಲಿಲ್ಲ, ಬದಲಾಗಿ ಜನರ ಅನಿಸಿಕೆಗಳ ಬಗ್ಗೆ ತಿಳಿಸಿದ್ದರು . ಕರುಣಾನಿಧಿ ಅವರನ್ನು ತಮಿಳುನಾಡಿನ ಲಕ್ಷಾಂತರ ಮಂದಿ ಪ್ರೀತಿಸುತ್ತಾರೆ ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


