ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 22 ಮಂದಿ ಸಜೀವ ದಹನ

ಉತ್ತರಪ್ರದೇಶದ ಬರೇಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 22 ಮಂದಿ ಸಜೀವ ದಹನಗೊಂಡಿರುವ ಘಟನೆ ಸೋಮವಾರ ನಡೆದಿದೆ...
ಅಪಘಾತಕ್ಕೀಡಾದ ಬಸ್ ಬಳಿ ನಿಂತಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ
ಅಪಘಾತಕ್ಕೀಡಾದ ಬಸ್ ಬಳಿ ನಿಂತಿರುವ ಅಗ್ನಿ ಶಾಮಕ ದಳದ ಸಿಬ್ಬಂದಿ
Updated on: 

ಬರೇಲಿ: ಉತ್ತರಪ್ರದೇಶದ ಬರೇಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 22 ಮಂದಿ ಸಜೀವ ದಹನಗೊಂಡಿರುವ ಘಟನೆ ಸೋಮವಾರ ನಡೆದಿದೆ.

ಉತ್ತರಪ್ರದೇಶ ರಾಜ್ಯ ರಸ್ತೆ ಸಾರಿಗೆ ಬಸ್ ವೊಂದು ನವದೆಹಲಿಯಿಂದ ಗೊಂಡಾ ಡಿಪೋಗೆ ತೆರಳುತ್ತಿತ್ತು. ಬೆಳಿಗ್ಗೆ 1 ಗಂಟೆ ಸುಮಾರಿಗೆ ಬರೇಲಿ ಬಳಿಯಿರುವ ರಾಷ್ಟ್ರೀಯ ಹೆದ್ದಾರಿ 24 ರ ಬರುತ್ತಿದ್ದಂತೆ ವೇಗವಾಗಿ ಬರುತ್ತಿದ್ದ ಟ್ರಕ್ ವೊಂದು ಡಿಕ್ಕಿ ಹೊಡೆದಿದೆ. 

ಡಿಕ್ಕಿ ಹೊಡೆದ ರಭಸಕ್ಕೆ ಪ್ರಯಾಣಿಕರ ಬಸ್ ನಲ್ಲಿ ಬೆಂಕಿ ಹೊತ್ತಿಕೊಂಡಿದೆ. ಅಲ್ಲದೆ, ಟ್ರಕ್ ನಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಪರಿಣಾಮ 22 ಮಂದಿ ಸಾವನ್ನಪ್ಪಿದ್ದಾರೆ. ಪ್ರಸ್ತುತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. 

ಸಿಎಫ್ಎಂ ಜಿಲ್ಲಾ ಆಸ್ಪತ್ರೆಯ ವೈದ್ಯ ಬಿ.ಸಿ. ಯಾದವ್ ಮಾತನಾಡಿ, 15 ಗಾಯಾಳುಗಳನ್ನು ಶ್ರೀ ಸಿದ್ಧಿ ವಿನಾಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಇದರಲ್ಲಿ ಒಬ್ಬ ಸ್ಥಿತಿ ಚಿಂತಾಜನಕವಾಗಿರುವ ಹಿನ್ನಲೆಯಲ್ಲಿ ಲಖನೌಗೆ ಕರೆದೊಯ್ಯುವಂತೆ ಸಲಹೆ ನೀಡಲಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 
ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ
ಒಡಿಶಾದಲ್ಲಿ ಸಂಭವಿಸಿದ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕುಟುಂಬಸ್ಥರ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. 

ದುರ್ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪ್ರಧಾನಮಂತ್ರಿಗಳ ಕಚೇರಿ, ಉತ್ತರಪ್ರದೇಶದ ಬರೇಲಿಯಲ್ಲಿ ನಡೆದ ಅಪಘಾತ ಹೃದಯವಿದ್ರಾವಕ ಘಟನೆಯಾಗಿದೆ. ಘಟನೆಯಲ್ಲಿ ಸಾವನ್ನಪ್ಪಿದವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬಸ್ಥರಿಗೆ ಪ್ರಧಾನಮಂತ್ರಿಗಳ ಪರಿಹಾರ ನಿಧಿಯಿಂದ ರೂ.2 ಲಕ್ಷ ಹಾಗೂ ಗಾಯಾಳುಗಳಿಗೆ ರೂ.50 ಸಾವಿರ ಹಣವನ್ನು ನೀಡಲಾಗುತ್ತದೆ ಎಂದು ಹೇಳಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com